ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಸಾವಿರಾರು ಕೋಟಿ ಅನುದಾನ ಪಡೆಯುತ್ತಿರುವ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ರಾಜಧಾನಿಯನ್ನು ಹೇಗೆ ಅಭಿವೃದ್ಧಿ ಪಡಿಸಿದ್ದಾರೆ ಎನ್ನುವುದಕ್ಕೆ ಇದು ಸಾಕ್ಷಿ ಎಂದು ಜೆಡಿಎಸ್ ವಿಡಿಯೋ ಅಪ್ ಲೋಡ್ ಮಾಡಿ ಟೀಕಿಸಿದೆ.
ಗುಂಡಿ ಬಿದ್ದಿರುವ ರಸ್ತೆಗಳು, ಕಿತ್ತುಹೋಗಿರುವ ಪಾದಚಾರಿ ಮಾರ್ಗಗಳ ದುರಸ್ತಿ ವಿಷಯವಾಗಿ ಹೈಕೋರ್ಟ್ ಪದೇ ಪದೇ ಛೀಮಾರಿ ಹಾಕುತ್ತಿದ್ದರೂ ರಾಜ್ಯ ಸರ್ಕಾರ ಇನ್ನೂ ಬುದ್ಧಿ ಕಲಿತಿಲ್ಲ.
ಕಾಮಗಾರಿ 10% ಆದ್ರೆ, ಬಿಲ್ 100% ! ಇದು ಕಾಂಗ್ರೆಸ್ ಸರ್ಕಾರದ ಲೂಟಿ ಯೋಜನೆಯಾಗಿದೆ. ಕಾಮಗಾರಿಗಳನ್ನು ಮಾಡದೆಯೇ ನಕಲಿ ಬಿಲ್‌ಗಳನ್ನು ಸೃಷ್ಟಿಸಿ, ಸಾವಿರಾರು ಕೋಟಿ ರೂ. ಕಬಳಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.
ಭ್ರಷ್ಟಾಚಾರಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಬೆಂಗಳೂರಿನ ಪಾದಚಾರಿ ಮಾರ್ಗಗಳ ಅವ್ಯವಸ್ಥೆಗೆ ಇದೊಂದು ನಿದರ್ಶನ ಎಂದು ಜೆಡಿಎಸ್ ತಿಳಿಸಿದೆ.

