ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ 11ವರ್ಷಗಳ ಸಾಧನೆಗಳು ವಿಕಸಿತ ಭಾರತದ ಸಂಕಲ್ಪಿತ ಹೆಗ್ಗುರುತುಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಮೈಸೂರಿನ ರಾಜೇಂದ್ರ ಕಲಾಭವನದಲ್ಲಿ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ವತಿಯಿಂದ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ 11 ವರ್ಷಗಳ ಸಾಧನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದೊಂದಿಗೆ ಸಾಗುತ್ತಿರುವ
ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ 11 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೇಶದ ಹಾಗೂ ರಾಜ್ಯದ ಪ್ರತಿಯೊಂದು ಮನೆಗಳಲ್ಲೂ ಕೇಂದ್ರ ಸರ್ಕಾರದ ಮಹತ್ವದ ಒಂದಿಲ್ಲೊಂದು ಯೋಜನೆಗಳ ಫಲಾನುಭವಿಗಳಿದ್ದು, ಪ್ರತಿಯೊಂದು ಮನೆಗಳಿಗೂ ಮೋದಿ ಅವರ ಸರ್ಕಾರದ ಜನಪರ ಯೋಜನೆಗಳು, ಬಡವರ ಪರವಾದ ಕಾರ್ಯಕ್ರಮಗಳ ಕುರಿತು ಅರಿವು ಮೂಡಿಸಿ ಪ್ರತಿ ಮನೆಗಳಿಗೆ ತಲುಪಿಸಬೇಕೆಂಬ ಸಂಕಲ್ಪ ಮಾಡಲಾಯಿತು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಯಧುವೀರ್ ಒಡೆಯರ್, ಮಾಜಿ ಸಚಿವ ಹಾಗೂ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಶಾಸಕರಾದ ಟಿ.ಎಸ್.ಶ್ರೀವತ್ಸ, ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಪಕ್ಷದ ರಾಜ್ಯ ಚುನಾವಣಾ ಸಂಚಾಲಕ ಗಣೇಶ್ ಕಾರ್ಣಿಕ್, ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಸಿಮೆಂಟ್ ಮಂಜು, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ,
ಅಲ್ಪಸಂಖ್ಯಾತರ ಮೋರ್ಚಾ ರಾಜ್ಯಾಧ್ಯಕ್ಷ ಅನಿಲ್ ಥಾಮಸ್, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ಶರಣು ತಳ್ಳೀಕೆರೆ, ಮಾಜಿ ಶಾಸಕ ಹಾಗೂ ನಗರ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಮಾಜಿ ಶಾಸಕ ನಿರಂಜನ್ ಕುಮಾರ್, ಡಾ.ಹರ್ಷವರ್ಧನ್, ಬಸವರಾಜು, ಮುಖಂಡರಾದ ಎಸ್ ಬಾಲರಾಜ್, ಫಣೀಶ್, ಮಂಗಳಾ ಸೋಮಶೇಖರ್, ಸದಾನಂದ್, ಮಹದೇವಯ್ಯ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.