ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೇಮಕ….

ಚಿತ್ರದುರ್ಗ ಜಿಲ್ಲಾ ಸುದ್ದಿ ವಿಶೇಷ ಸುದ್ದಿ

ಚಿತ್ರದುರ್ಗ:

ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಎಸ್. ತಿಮ್ಮಯ್ಯ ಮ್ಯಾಕ್ಲೂರಹಳ್ಳಿ ಇವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಸಿ. ಶಿವು ಯಾದವ್ ತಿಳಿಸಿದ್ದಾರೆ.

ತಮ್ಮ ಪ್ರಾಮಾಣಿಕತೆ, ಸಂಘಟನೆ ಮತ್ತು ಕಾಡುಗೊಲ್ಲ ಸಮುದಾಯದ ಕಾಳಜಿ ಗೌರವಿಸಿ ಎಸ್. ತಿಮ್ಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ತಾವುಗಳು ಇನ್ನು ಮುಂದೆ ತಮ್ಮ ಸೇವೆಯನ್ನು ಕಾಡುಗೊಲ್ಲ ಜನಾಂಗದ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಾ, ಬುಡಕಟ್ಟು ಕಾಡುಗೊಲ್ಲ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಸಂಘದ ಸಿದ್ಧಾಂತಗಳಿಗೆ ಮತ್ತು ಬದ್ದತೆಗಳಿಗೆ ಒಳಪಟ್ಟು ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಂಡು ಹೋಗಬೇಕೆಂದು ನೇಮಕಾತಿ ಆದೇಶ ಪತ್ರದಲ್ಲಿ ಯದವ್ ತಿಳಿಸಲಾಗಿದೆ.

What’s your Reaction?
+1
0
+1
0
+1
0
+1
0
+1
0
+1
0
+1
0