ಮಹಿಳಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಮಹಿಳೆಯರಿಗಾಗಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ…

ಕೋಲಾರ ಜಿಲ್ಲಾ ಸುದ್ದಿ ವಿಶೇಷ ಸುದ್ದಿ

ಮಹಿಳಾ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಮಹಿಳೆಯರಿಗಾಗಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ…

ಕೋಲಾರ: 

ಕೇಂದ್ರ ಸರ್ಕಾರದಿಂದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸಖಿ ಒನ್ ಸ್ಟಾಪ್ ಸೆಂಟರ್‍ಗೆ 08 ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: ಕೇಂದ್ರ ಆಡಳಿತಾಧಿಕಾರಿ (Centre Administrator), ಕೌನ್ಸಿಲರ್ (Counsellor Psycho-social counseling) ತಲಾ 1 ಹುದ್ದೆಗಳು, ವಿಷಯ ನಿರ್ವಾಹಕರು ಅಥವಾ ಸಮಾಜ ಸೇವಾ ಕಾರ್ಯಕರ್ತರು (Case Worker/ Social Worker), ಪ್ಯಾರಾಲೀಗಲ್ ಪರ್ಸನಲ್ ಅಥವಾ ಲಾಯರ್, ಮಹಿಳಾ ಸ್ವಚ್ಛತಾಗಾರರು ಅಥವಾ ರಕ್ಷಕರು ತಲಾ 2 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು.
ಸಖಿ ಒನ್ ಸ್ಟಾಪ್ ಸೆಂಟರ್‍ಗಳಲ್ಲಿ ನೇಮಕವಾಗುವ ಸಿಬ್ಬಂದಿಗಳು 24/7 ಕಾರ್ಯನಿರ್ವಹಿಸಲು ಅನುವಾಗುವಂತೆ ವಿವಿಧ ಪಾಳಿಗಳಲ್ಲಿ (ಶಿಪ್ಟ್‍ಗಳಲ್ಲಿ) ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿಗಳನ್ನು ಸಲ್ಲಿಸಲು ಜನವರಿ 27 ರಂದು ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08152-222753 ಗೆ ಅಥವಾ ಉಪ ನಿರ್ದೇಶಕರ ಕಛೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ ಇಲ್ಲಿಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿದೇಶಕರು ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0