ಲೈಂಗಿಕ ಕೃತ್ಯ ಸಂಪುಟದ ಒಂದು ವಿಕೆಟ್ ಪತನ, ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ…
ಬೆಂಗಳೂರು:
ಲೈಂಗಿಕ ಕೃತ್ಯದಿಂದಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಚಿವ ಸಂಪುಟದ ಒಂದು ವಿಕೆಟ್ ಪತನವಾಗಿದೆ. ಉತ್ತರ ಕರ್ನಾಟಕ ಮೂಲದ ಯುವತಿಯೊಬ್ಬಳೊಂದಿಗೆ ನಡೆಸಿದ ರಾಸಲೀಲೆಯ ಸಿಡಿ ಬಹಿರಂಗವಾಗಿದ್ದು ಈ ಪ್ರಕರಣ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿಡಿ ಬಹಿರಂಗದಲ್ಲಿ ನನ್ನ ತಪ್ಪು ಇಲ್ಲದಿದ್ದರೂ, ನಾನು ನಿರ್ದೂಷಿಯಾಗುವ ವಿಶ್ವಾಸ ಇದ್ದರೂ ಕೇಳಿ ಬಂದಿರುವ ಆರೋಪಗಳ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದು ದಯವಿಟ್ಟು ಅಂಗೀಕರಿಸುವಂತೆ ಮುಖ್ಯಮಂತ್ರಿಗಳಲ್ಲಿ ರಮೇಶ್ ಜಾರಕಿಹೊಳಿ ಮನವಿ ಮಾಡಿ ತಿಳಿಸಿದ್ದಾರೆ. ಅಷ್ಟೇ ಅಲ್ಲ ಬೇಗ ತನಿಖೆ ಪೂರ್ಣಗೊಳಿಸುವಂತೆ ಅವರು ಒತ್ತಾಯ ಮಾಡಿದ್ದಾರೆ.
ಯುವತಿಯೊಂದಿಗೆ ರಮೇಶ್ ಜಾರಕಿಹೊಳಿ ನಡೆಸಿರುವ ರಾಸಲೀಲೆಯ ಸಿಡಿಯನ್ನು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬಿಡಗುಡೆ ಮಾಡಿದ್ದರು. ಇದು ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಮುಜುಗರ ಉಂಟಾತ್ತು. ಹೀಗಾಗಿ ರಮೇಶ್ ಜಾರಕಿಹೊಳಿ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷಕ್ಕೆ ಆಗುವ ಮುಜುಗರ ತಪ್ಪಿಸಿದ್ದಾರೆ.