ಹುಟ್ಟುಹಬ್ಬದ ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ ರಾಜ್ಯಾಧ್ಯಕ್ಷರಾದ ಜಿ.ಎಸ್. ಮಂಜುನಾಥ್…
ಚಿತ್ರದುರ್ಗ:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ರಾಜ್ಯಾಧ್ಯಕ್ಷರಾದ ಜಿ.ಎಸ್. ಮಂಜುನಾಥ್ ರವರು ಹುಟ್ಟುಹಬ್ಬದ ಪ್ರಯುಕ್ತ ಕೋವಿಡ್ ನಿಂದ ಮೃತಪಟ್ಟಿದ್ದ ಪಬ್ಲಿಕ್ ಟಿವಿಯ ಕ್ಯಾಮೆರಾಮನ್ ಬಸವರಾಜು ಕೋಟಿ ಅವರ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಧನ ಸಹಾಯ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಜಿ.ಬಿ.ಬಾಲಕೃಷ್ಣಸ್ವಾಮಿ ಯಾದವ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ, ಇಂಟೆಕ್ ಜಿಲ್ಲಾಧ್ಯಕ್ಷ ಅಶೋಕ ನಾಯ್ಡು, ಪದವಿಧರ ಶಿಕ್ಷಣ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಅಸಂಘಟಿತ ಕಾರ್ಮಿಕ ರಾಜ್ಯ ಕಾರ್ಯದರ್ಶಿ ಎ ಅಶ್ರಫಆಲಿ, ಮುನಿರಾಜು, ಯುವ ಕಾಂಗ್ರೆಸ್ ನ ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.
What’s your Reaction?
+1
+1
+1
+1
+1
+1
+1