ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ…

ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ ವಿಜ್ಞಾನ ವಿಶೇಷ ಸುದ್ದಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

2021-22ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 21 ಕೊನೆಯ ದಿನವಾಗಿದೆ.
www.ssp.karnataka.gov.in/8080/2122 ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಹತೆ: 1ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿವೇತನ ರೂ. 2.50/- ಲಕ್ಷ ವಾರ್ಷಿಕ,  ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನ ರೂ. 1.00/-ಲಕ್ಷ ವಾರ್ಷಿಕ, ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ಮಾತ್ರ ರೂ. 44.500/-ವಾರ್ಷಿಕ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗಗಳಿಗೆ.
ವಿದ್ಯಾರ್ಥಿ ವೇತನ ಸೌಲಭ್ಯ ವಿವರ: ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿವೇತನ 1 ರಿಂದ 10ನೇ ತರಗತಿ ಬಾಲಕ ಮತ್ತು ಬಾಲಕಿಯರಿಗೆ 10 ತಿಂಗಳಿಗೆ ರೂ. 2000/-. ರಾಜ್ಯ ವಿದ್ಯಾರ್ಥಿ ವೇತನ 1 ರಿಂದ 5ನೇ ತರಗತಿ ಬಾಲಕ ಮತ್ತು ಬಾಲಕಿಯರಿಗೆ 10 ತಿಂಗಳಿಗೆ ಒಟ್ಟು ರೂ. 750/-, 6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ  ಒಟ್ಟು ರೂ. 900/-, 9 ರಿಂದ 10ನೇ ತರಗತಿಯವರಿಗೆ ಒಟ್ಟು ರೂ. 1000/- ಗಳ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲಾಗುವುದು.
ಫಲಾನುಭವಿಯ ಜಾತಿ: ರಾಜ್ಯ ಸರ್ಕಾರವು ಅಧಿಸೂಚಿಸಿರುವ ಪ್ರವರ್ಗ-1 2ಎ, 3ಎ, ಮತ್ತು 3ಬಿ ಹಾಗೂ ಕೇಂದ್ರ  ಸರ್ಕಾರವು ಅಧಿಸೂಚಿಸಿರುವ ಇತರೆ  ಹಿಂದುಳಿದ ವರ್ಗಗಳಡಿ ಬರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯಕ್ಕೆ ಅರ್ಹರಾಗುವುದಿಲ್ಲ.
ಆದಾಯ ಮತ್ತು ಮೆರಿಟ್ ಆಧಾರದಲ್ಲಿ ಮಂಜೂರಾತಿ: ಪ್ರವರ್ಗ-1 ಮತ್ತು ಅಲೆಮಾರಿ, ಅರೆಅಲೆಮಾರಿ ಜನಾಂಗಗಳಿಗೆ ಸೇರಿದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುವುದು. ತದ ನಂತರ ಇನ್ನುಳಿದ ವಿದ್ಯಾರ್ಥಿಗಳಿಗೆ ಆದಾಯ ಮತ್ತು ಮೆರಿಟ್ ಆಧಾರದ ಮೇಲೆ ರಾಜ್ಯ ವಿದ್ಯಾರ್ಥಿ ವೇತನ  ಮಂಜೂರು ಮಾಡಲಾಗುವುದು.
ಅಗತ್ಯ ದಾಖಲಾತಿಗಳು: ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್-ಐಡಿ (ಸ್ಯಾಟ್ಸ್-ಐಡಿ ತಿಳಿಯಲು ವೆಬ್ ವಿಳಾಸ http://sts.karnataka.gov.in).. ವಿದ್ಯಾರ್ಥಿಯ ಆಧಾರ್ ಸಂಖ್ಯೆ, ಪೋಷಕರ ಅಧಾರ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ, ಆದಾಯ ಪ್ರಮಾಣಪತ್ರದ ಆರ್.ಡಿ. ಸಂಖ್ಯೆ, ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ. ವಿದ್ಯಾರ್ಥಿ ನಿಲಯ ಪ್ರವೇಶ ಸಂಖ್ಯೆ (ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು), ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆ (ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು), ಆಧಾರ್ ಸಂಖ್ಯೆ ಇಲ್ಲದಿದ್ದಲ್ಲಿ, ಆಧಾರ್ ನೋಂದಣಿ ಮಾಡಿಸಿ ಇ.ಐ.ಡಿ ಸಂಖ್ಯೆ ಬ್ಯಾಂಕ್ ಖಾತೆ ಸಂಖ್ಯೆ , ಐಎಫ್‍ಎಸ್‍ಸಿ ಸಂಖ್ಯೆ, ಬ್ಯಾಂಕಿನ  ವಿಳಾಸ ಪೋಷಕರ ಆಧಾರ್ ನಂಬರ್‍ಗೆ ಲಿಂಕ್ ಮಾಡಿರುವ ಮೊಬೈಲ್ ನಂಬರ್ ಹಾಗೂ ಭೌತಿಕ ಅನುಮತಿ ಪತ್ರ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ  ತಾಲ್ಲೂಕು ಹಿಂದುಳಿದ ವರ್ಗಗಳ  ಕಲ್ಯಾಣಾಧಿಕಾರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ www.backwardclasses.kar.nic.inಗೆ ಸಂಪರ್ಕಿಸಬಹುದು ಎಂದು ಎಂದು ಚಿತ್ರದುರ್ಗ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ