ಶಾಲಾ ಕಾಲೇಜ್ ಮಕ್ಕಳಿಗೆ ಗುಡ್ ನ್ಯೂಸ್, ಜ.03ರಂದು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ ಉದ್ಘಾಟನೆ…

ಅರೋಗ್ಯ ಕೋರೊನ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ

ಶಾಲಾ ಕಾಲೇಜ್ ಮಕ್ಕಳಿಗೆ ಗುಡ್ ನ್ಯೂಸ್, ಜ.03ರಂದು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ ಉದ್ಘಾಟನೆ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ 15 ರಿಂದ 18 ವರ್ಷದೊಳಗಿನ ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಜನವರಿ 03ರಂದು ಬೆಳಿಗ್ಗೆ 08 ಗಂಟೆಗೆ ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
15 ರಿಂದ 18 ವರ್ಷದ ಜಿಲ್ಲೆಯ 76142 ಮಕ್ಕಳಿಗೆ ಕೋವ್ಯಾಕ್ಸಿನ್ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ತರಬೇತಿ ಹೊಂದಿದ ವ್ಯಾಕ್ಸಿನೇಟರ್ಸ್‍ಗಳು ಲಸಿಕೆ ನೀಡುತ್ತಾರೆ. ಆದ್ದರಿಂದ ಎಲ್ಲ ಫೋಷಕರು ತಪ್ಪದೇ ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸಬೇಕು.
ಕಾರ್ಯಕ್ರಮ ಸಂಬಂಧ ಶಾಲಾ ಶಿಕ್ಷಕರಿಗೆ, ವೈದ್ಯಾಧಿಕಾರಿಗಳಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಇಲಾಖೆಯ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದು ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಕುಮಾರಸ್ವಾಮಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply