ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದ ಜಿ.ಪಂ ಸಿಇಒ ಡಾ.ನಂದಿನಿ ದೇವಿ…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಳ್ಳಕೆರೆ ಜಿಲ್ಲಾ ಸುದ್ದಿ ಸಾಧನೆ

 ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದ ಜಿ.ಪಂ ಸಿಇಒ ಡಾ.ನಂದಿನಿ ದೇವಿ…

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ನಗರದ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ವೇಳೆ ವಿದ್ಯಾರ್ಥಿ ನಿಲಯ ಆವರಣ ಸ್ವಚ್ಛತೆ, ದಾಸ್ತಾನು ಕೊಠಡಿ, ಕಂಪ್ಯೂಟರ್ ಮತ್ತು ಗ್ರಂಥಾಲಯ ಕೊಠಡಿ ವೀಕ್ಷಿಸಿದರು. ನಂತರ ವಿದ್ಯಾರ್ಥಿನಿಯರೊಂದಿಗೆ ಮಧ್ಯಾಹ್ನದ ಊಟ ಸೇವಿಸಿ, ವಿದ್ಯಾರ್ಥಿನಿಯರು ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. 15 ರಿಂದ 18 ವರ್ಷದ ಮಕ್ಕಳು ಕೋವಿಡ್ ಲಸಿಕೆ ಪಡೆಯಬೇಕು ಎಂದರು.
ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟು, ಉತ್ತಮ ಅಂಕಗಳನ್ನು ಪಡೆಯಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗ್ರೇಡ್-1 ಡಿ.ಚಿದಾನಂದಪ್ಪ ಹಾಗೂ ನಿಲಯಪಾಲಕರಾದ ವಿದ್ಯಾರಾಣಿ, ಅಲಿಜಾನ್ ಇದ್ದರು.  

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply