ಪೌರ ಕಾರ್ಮಿಕರ ಸಮಸ್ಯೆಗಳಿಗೆ ಶೀಘ್ರ ಸಭೆ-ಶಾಸಕ ಜಿ.ಎಚ್.ತಿಪ್ಪಾರೆಡ್ಡಿ….

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ ವಿಶೇಷ ಸುದ್ದಿ

ಪೌರ ಕಾರ್ಮಿಕರ ಸಮಸ್ಯೆಗಳಿಗೆ ಶೀಘ್ರ ಸಭೆ-ಶಾಸಕ ಜಿ.ಎಚ್.ತಿಪ್ಪಾರೆಡ್ಡಿ….

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಪೌರ ಕಾರ್ಮಿಕರ ಸಮಸ್ಯೆಗಳ ನಿವಾರಣೆಗಾಗಿ ಶೀಘ್ರದಲ್ಲೇ ಸಭೆ ಕರೆದು ಚರ್ಚಿಸಿ ಪರಿಹಾರ ಹುಡುಕುವುದಾಗಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಭರವಸೆ ನೀಡಿದರು.
ನಗರದಲ್ಲಿ ಚಿತ್ರದುರ್ಗ ಜಿಲ್ಲಾ ಪೌರ ಕಾರ್ಮಿಕರ ಸಂಘದ ಉದ್ಘಾಟನೆ ಹಾಗೂ ನಿವೃತ ಪೌರ ಕಾರ್ಮಿಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕರು, ಪೌರ ಕಾರ್ಮಿಕರಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ನೀಡಿದೆ. ಆದರೆ ಆ ಸೌಲಭ್ಯಗಳನ್ನು ಪಡೆಯುವಲ್ಲಿ ಸಂಘಟನೆ ಹಿಂದೆ ಬಿದ್ದಿದೆ. ಪದಾಧಿಕಾರಿಗಳು ಇದರ ಬಗ್ಗೆ ಆಸಕ್ತಿವಹಿಸಿ ಪೌರ ಕಾರ್ಮಿಕರಿಗೆ ದೂರಕಬೇಕಾದ ಸೌಲಭ್ಯಗಳನ್ನು ಕೂಡಿಸುವಲ್ಲಿ ಮುಂದಾಗಬೇಕಿದೆ ಎಂದು ಕಿವಿ ಮಾತು ಹೇಳಿದರು.
ನಗರದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರು ಅತ್ಯಂತ ಶ್ರಮ ಜೀವಿಗಳಾಗಿದ್ದಾರೆ. ಇವರು ತಮ್ಮ ಆರೋಗ್ಯವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಾರೆ. ಈ ಕೆಲಸವನ್ನು ಯಾರೂ ಮಾಡುವುದಿಲ್ಲ, ಇವರ ಕೆಲಸಕ್ಕೆ ಉತ್ತಮ ವೇತನ ನೀಡಬೇಕಿದೆ. ಚಿತ್ರದುರ್ಗ ನಗರದಲ್ಲಿ ಪೌರ ಕಾರ್ಮಿಕರಿಗೆ ಮನೆಗಳನ್ನು ನೀಡಲಾಗಿದೆ. ಇನ್ನೂ ಹಲವಾರು ಜನರಿಗೆ ನೀಡಬೇಕಿದೆ ಇದಕ್ಕಾಗಿ ಭೂಮಿ ಅಗತ್ಯ ಇದೆ. ಭೂಮಿ ಖರೀದಿ ಮಾಡಿ ಕೊಡಲು ಅವಕಾಶ ಇದೆ, ನಗರದ ಸುತ್ತಾ-ಮುತ್ತಲಿನ ಪ್ರದೇಶದಲ್ಲಿ ಎಲ್ಲಿಯಾದರೂ ಭೂಮಿ ಸಿಕ್ಕರೆ ಖರೀದಿ ಮಾಡಿ ಮನೆ ನಿರ್ಮಾಣ ಮಾಡಿಕೊಡುವುದು ನನ್ನ ಜವಾಬ್ದಾರಿ ಎಂದು ಶಾಸಕ ತಿಪ್ಪಾರೆಡ್ಡಿ ಭರವಸೆ ನೀಡಿದರು.
ಚಿತ್ರದುರ್ಗದಲ್ಲಿ ಈಗಾಗಲೇ ಮನೆಗಾಗಿ 15 ಸಾವಿರ ಅರ್ಜಿಗಳು ಬಂದಿದ್ದು ಅದರಲ್ಲಿ ಸುಮಾರು 7 ರಿಂದ 8 ಸಾವಿರ ಅರ್ಜಿಗಳು ಬೋಗಸ್ ಇವೆ. ಅರ್ಹರನ್ನು ಪತ್ತೆ ಮಾಡಿ ನಿವೇಶನ ನೀಡಲಾಗುತ್ತದೆ. ಅಲ್ಲದೆ ಎಲ್ಲಾ ಜನಾಂಗದರಿಗೆ ಮನೆಗಳನ್ನು ಹಂಚಲಾಗುತ್ತದೆ. ಕೊಳಚೆ ನಿರ್ಮೂಲನಾ ಮಂಡಳಿಯಿಂದ ಮನೆಗಳ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿದೆ. ಆದರೆ ಟೆಂಡರ್ ದಾರ ಮನೆಗಳನ್ನು ನಿರ್ಮಾಣ ಮಾಡಲು ಮೀನಾ ಮೇಷ ಏಣಿಸುತ್ತಿದ್ದಾನೆ. ಅವನು ಮನೆ ನಿರ್ಮಾಣಕ್ಕೆ ಮುಂದಾಗದಿದ್ದರೆ ಹೊಸದಾಗಿ ಟೆಂಡರ್ ಕರೆಯುವಂತೆ ಸೂಚಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ರಾಜ್ಯ ಪೌರ ಸೇವಾ ನೌಕರರ ಸಂಘದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್ ಮಾತನಾಡಿ, ಪೌರ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಅವರಿಗೆ ಮನೆ, ನಿವೇಶನ ಸೇರಿದಂತೆ ಮಕ್ಕಳ ಶಿಕ್ಷಣ, ಆರೋಗ್ಯಕ್ಕಾಗಿ ವಿಶೇಷ ಅನುದಾನ ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಜನ ಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಇರಬೇಕಂದು ಕಾನೂನು ಇದೆ. ಆದರೆ ಅಷ್ಟು ಪ್ರಮಾಣದಲ್ಲಿ  ಪೌರ ಕಾರ್ಮೀಕರಿಲ್ಲ, ಇದರಿಂದಾಗಿ ಪೌರ ಕಾರ್ಮಿಕರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ವಚ್ಛತೆಗಾರರ ಸಮಸ್ಯೆ ಒಂದು ಕಡೆಯಾದರೆ ಲಾರಿಗೆ ಕಸ ತುಂಬಿ ಹಾಕುವವರ ಸಂಖ್ಯೆಯೂ ಕಡಿಮೆ ಇದೆ. ಸರ್ಕಾರದಿಂದ ಪೌರಕಾರ್ಮಿಕರಿಗಾಗಿ ವಿವಿಧ ರೀತಿಯ ಸೌಲಭ್ಯ ಕೂಡಿಸಲಾಗಿದೆ ಆದನ್ನು ಪಡೆಯುವಲ್ಲಿ ಪದಾಧಿಕಾರಿಗಳು ಹಿಂದೆ ಬಿದಿದ್ದಾರೆ ಎಂದು ಹೇಳಿದರು.
ಪೌರ ಕಾರ್ಮಿಕರಿಗೆ ಸಕಾಲಕ್ಕೆ ವೇತನ ನೀಡಬೇಕೆಂದು ಕಾನೂನು ಇದ್ದರೂ ನಗರಸಭೆ, ಪುರಸಭೆಗಳಲ್ಲಿ ಸಕಾಲದಲ್ಲಿ ವೇತನ ನೀಡುತ್ತಿಲ್ಲ, ಹೊರ ಗುತ್ತಿಗೆದಾರರನ್ನು ಕಾಯಂ ಮಾಡಿಕೊಳ್ಳಬೇಕು. ಕಾಯಂ ಪೌರ ಕಾರ್ಮಿಕರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಗುತ್ತಿಗೆ ಪೌರ ಕಾರ್ಮಿಕರಿಗೂ ನೀಡಬೇಕು ಎಂದು ಜಿ.ಎಸ್.ಮಂಜುನಾಥ್ ಒತ್ತಾಯಿಸಿದರು. 
ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ಉಪಾಧ್ಯಕ್ಷೆ ಅನುರಾಧ ರವಿಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ರಾಜ್ಯ ಪೌರ ಸೇವಾ ನೌಕರರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ತಾಲ್ಲೂಕು ಅಧ್ಯಕ್ಷೆ ರೇಣುಕಾ, ಉಪಾಧ್ಯಕ್ಷ ಜಗದೀಶ್, ಸಹ ಕಾರ್ಯದರ್ಶಿ ಮಂಜಣ್ಣ ಸೇರಿದಂತೆ ನಗರಸಭಾ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ದುರುಗೇಶ್ ವಹಿಸಿದ್ದರು, ಪ್ರಧಾನ ಕಾರ್ಯದರ್ಶಿ ರಾಜಣ್ಣ ಪ್ರಸ್ತಾವಿಕ ಮಾತನಾಡಿದರು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply