ಸೋಮವಾರದ ಹೆಲ್ತ್ ಬುಲೆಟಿನ್, ಜಿಲ್ಲೆಯಲ್ಲಿ ಏರಿಕೆಯಾಗುತ್ತಲೇ ಇರುವ ಕೋವಿಡ್ ಸೋಂಕು, ಯಾವ ತಾಲೂಕಿನಲ್ಲಿ ಎಷ್ಟು ಸೋಂಕು ದೃಢ…?

ಅರೋಗ್ಯ ಕೋರೊನ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ

ಸೋಮವಾರದ ಹೆಲ್ತ್ ಬುಲೆಟಿನ್, ಜಿಲ್ಲೆಯಲ್ಲಿ ಏರಿಕೆಯಾಗುತ್ತಲೇ ಇರುವ ಕೋವಿಡ್ ಸೋಂಕು, ಯಾವ ತಾಲೂಕಿನಲ್ಲಿ ಎಷ್ಟು ಸೋಂಕು ದೃಢ…?

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 27 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36,874ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 14 , ಚಳ್ಳಕೆರೆ 03, ಹಿರಿಯೂರು 8, ಹೊಳಲ್ಕೆರೆ 0, ಹೊಸದುರ್ಗ 01 ಹಾಗೂ ಮೊಳಕಾಲ್ಮುರು 01 ಪ್ರಕರಣ ಸೇರಿದಂತೆ ಒಟ್ಟು 27 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ ಒಬ್ಬರು ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಸೋಮವಾರ ಒಟ್ಟು 2737 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ಕೋವಿಡ್‍ನಿಂದ  ಸೋಮವಾರದವರೆಗೆ ಒಟ್ಟು 212 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 36,557 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 105 ಸಕ್ರಿಯ ಪ್ರಕರಣಗಳು ಇವೆ. ಸೋಮವಾರದ ಪಾಸಿಟಿವ್ ರೇಟ್ 0.98 ಇದ್ದು, ಕಳೆದ ಹತ್ತು ದಿನಗಳ ಪಾಸಿಟಿವ್ ರೇಟ್ 0.84 ಇದೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,97,170 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

  ಈವರೆಗೆ 9,21,841 ಜನರ ಮಾದರಿ ಸಂಗ್ರಹಿಸಲಾಗಿದ್ದು, 8,82,08 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 2083 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply