ಬೀದಿ ಬದಿ ವ್ಯಾಪಾರಿಗಳು ಕಡ್ಡಾಯವಾಗಿ ಬೂಸ್ಟರ್ ಡೋಸ್ ಲಸಿಕೆ ಪಡೆಯಬೇಕು-ಶಾಸಕಿ ಪೂರ್ಣಿಮಾ ಶ್ರೀನಿವಾಸ್…

ಅರೋಗ್ಯ ಕೋರೊನ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಜಿಲ್ಲಾ ಸುದ್ದಿ ಹಿರಿಯೂರು

ಬೀದಿ ಬದಿ ವ್ಯಾಪಾರಿಗಳು ಕಡ್ಡಾಯವಾಗಿ ಬೂಸ್ಟರ್ ಡೋಸ್ ಲಸಿಕೆ ಪಡೆಯಬೇಕು-ಶಾಸಕಿ ಪೂರ್ಣಿಮಾ ಶ್ರೀನಿವಾಸ್…

ಚಂದ್ರವಳ್ಳಿ ನ್ಯೂಸ್, ಹಿರಿಯೂರು:

ಹಿರಿಯೂರು ನಗರದ ನೆಹರೂ ಮಾರ್ಕೇಟ್ ನಲ್ಲಿ ನಡೆದ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ವರ್ತಕರಿಗೆ ಕೋವಿಡ್ 19 ಪರೀಕ್ಷೆ ಹಾಗೂ ಜಾಗೃತಿ ಅಭಿಯಾನವನ್ನು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಚಾಲನೆ ನೀಡಿದರು.

3ನೆ ಅಲೆ ಅತಿ ವೇಗವಾಗಿ ಹೋರಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನೇರವಾಗಿ ಸಂಪರ್ಕ ಇರುವ ಬೀದಿ ಬದಿ ವ್ಯಾಪಾರಿಗಳು ವರ್ತಕರು ಮುಂತಾದವರಿಗೆ ಇಂದಿನಿಂದ ಬೂಸ್ಟರ್ ಡೋಸ್ ಕಡ್ಡಾಯವಾಗಿ ಹಾಕಿಸಿಕೊಳ್ಳಲು ಶಾಸಕರು ಮನವಿ ಮಾಡಿದರು.

ಸೋಂಕಿತರಿಗೆ ಸ್ಥಳದಲ್ಲೇ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆ ನೀಡುವ ಕೆಲಸವನ್ನು ಇಂದಿನಿಂದಲೇ ಪ್ರಾರಂಭವಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷ ಡಿ ಟಿ ಶ್ರೀನಿವಾಸ್ ರವರು 3ನೇ ಅಲೆಯನ್ನು ಹಿರಿಯೂರು ತಾಲ್ಲೂಕಿನಲ್ಲಿ ತಡೆಗಟ್ಟಲು ಸರ್ಕಾರದ ನಿಯಮಗಳನ್ನು ಪಾಲಿಸಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಮುಖಂಡ ಎಂ.ಎಸ್.ರಾಘವೇಂದ್ರ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ ವೆಂಕಟೇಶ್, ಡಿವೈಎಸ್ಪಿ ರೋಷನ್ ಜಮೀರ್, ನಗರಸಭೆ ಆಯುಕ್ತ ಉಮೇಶ್, ಜಿಪಂ ಮಾಜಿ ಸದಸ್ಯೆ ರಾಜೇಶ್ವರಿ, ನಗರಸಭೆ ಮಾಜಿ ಅಧ್ಯಕ್ಷ ಟಿ ಚಂದ್ರಶೇಖರ್, ಸದಸ್ಯರಾದ ಪಲ್ಲವ, ಸರವಣ ಮುಂತಾದವರು ಉಪಸ್ಥಿತರಿದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply