ಓಮೈಕ್ರಾನ್ ವೈರಸ್ ನ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಗ್ರಾಮ ಪಂಚಾಯಿತಿವಾರು ನೋಡಲ್ ಅಧಿಕಾರಿಗಳ ನೇಮಕ-ಪೂರ್ಣಿಮಾ ಶ್ರೀನಿವಾಸ್…

ಅರೋಗ್ಯ ಕೋರೊನ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಜಿಲ್ಲಾ ಸುದ್ದಿ ಸಾಧನೆ ಹಿರಿಯೂರು

ಓಮೈಕ್ರಾನ್ ವೈರಸ್ ನ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಗ್ರಾಮ ಪಂಚಾಯಿತಿವಾರು ನೋಡಲ್ ಅಧಿಕಾರಿಗಳ ನೇಮಕ-ಪೂರ್ಣಿಮಾ ಶ್ರೀನಿವಾಸ್…

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕಿನಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು ಮತ್ತು ಓಮೈಕ್ರಾನ್ ವೈರಸ್ ನಿಯಂತ್ರಣ ಮಾಡಲು ಗ್ರಾಮ ಪಂಚಾಯಿತಿವಾರು ವಿವಿಧ ಇಲಾಖೆಗಳನ್ನೊಳಗೊಂಡ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ನಗರದ ಪೊಲೀಸ್ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್ ನಿಯಂತ್ರಣ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊರೊನಾ ಸೋಂಕಿತರಿಗೆ ಸ್ಥಳದಲ್ಲೇ ಔಷಧಿ ಕಿಟ್ ಗಳನ್ನು ವಿತರಿಸುವ ಮೂಲಕ ಅವರ ಆರೋಗ್ಯದ ಬಗ್ಗೆ ಸೂಕ್ತ ಕಾಳಜಿ ವಹಿಸಬೇಕೆಂದು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸೂಚನೆ ನೀಡಿದರು.


ರಾಜ್ಯ ಪ್ರವರ್ಗ-1ರ ಜಾತಿಗಳ ಒಕ್ಕೂಟದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಕೋವಿಡ್ ನಿಯಂತ್ರಣ ಮಾಡಲು ಸರ್ಕಾರದ ಕೋವಿಡ್ ನಿಯಮಗಳನ್ನು ತಪ್ಪದೇ ಪಾಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ತಾಲೂಕು ತಹಶೀಲ್ದಾರ್ ಶಿವಕುಮಾರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಪ್ರಸಾದ್, ನಗರಸಭೆ ಪೌರಾಯುಕ್ತ ಉಮೇಶ್, ಡಿವೈಎಸ್ಪಿ ರೋಷನ್ ಜಮೀರ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ, ಸಿಪಿಐ ರಾಘವೇಂದ್ರ, ಶಿವಕುಮಾರ್ ಇತರರು ಉಪಸ್ಥಿತರಿದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply