ಕಾಲೇಜ್ ಸೀಲ್ ಡೌನ್, ಸರ್ಕಾರಿ ಪದವಿಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ, ಇತರೆ ಕಾಲೇಜ್ ಗಳಲ್ಲೂ ಸೋಂಕು ಪತ್ತೆ… 

ಅರೋಗ್ಯ ಕೋರೊನ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಜಿಲ್ಲಾ ಸುದ್ದಿ ಹಿರಿಯೂರು

ಕಾಲೇಜ್ ಸೀಲ್ ಡೌನ್, ಸರ್ಕಾರಿ ಪದವಿಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ, ಇತರೆ ಕಾಲೇಜ್ ಗಳಲ್ಲೂ ಸೋಂಕು ಪತ್ತೆ… 

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರಿಂದಾಗಿ 5 ದಿನಗಳವರೆಗೆ ಕಾಲೇಜನ್ನು ಸೀಲ್ ಡೌನ್ ಮಾಡಲಾಗಿದೆ.

ಕೊರೊನಾ ಸೋಂಕು ಹರಡುವುದನ್ನು ತಡೆಯಲು ವಿದ್ಯಾರ್ಥಿಗಳಿಗೆ 5 ದಿನ ರಜೆ ನೀಡುವಂತೆ ತಹಶೀಲ್ದಾರ ಶಿವಕುಮಾರ್ ಕಾಲೇಜಿನ ಪ್ರಾಂಶುಪಾಲರಿಗೆ ಆದೇಶಿಸಿದ್ದಾರೆ.
ಜಿಲ್ಲಾ ಪಿಯು ಉಪನಿರ್ದೇಶಕಿ ಶೋಭಾ ಕಳೆದ ವಾರ ಕಾಲೇಜಿನ 800 ವಿದ್ಯಾರ್ಥಿಗಳಿಗೆ ಕೊರೊನಾ ತಪಾಸಣೆ ಮಾಡಿದ್ದರು. ಅದರಲ್ಲಿ 5 ಜನ ಬಾಲಕರು ಓರ್ವ ವಿದ್ಯಾರ್ಥಿನಿ ಸೇರಿ ಒಟ್ಟು 6 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದು ವರದಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಇಲಾಖೆಯ ನಿರ್ದೇಶನದಂತೆ ಸರ್ಕಾರದ ಕೋವಿಡ್ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲು ಸಂಬಂಧ ಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ತಿಳಿಸಲಾಗಿದೆ. ಅಲ್ಲದೆ ಜಿಲ್ಲೆಯ ಎಲ್ಲ ಪಿಯು ಕಾಲೇಜುಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ನಾಗರಾಜ್ ಮಾತನಾಡಿ ತಾಲೂಕಿನ ವಾಣಿವಿಲಾಸಪುರ, ಯಲ್ಲದಕೆರೆ, ನಂಜಯ್ಯನ ಕೊಟ್ಟಿಗೆ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ವಿದ್ಯಾರ್ಥಿಗಳು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕಾಲೇಜನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply