ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಸೀಲ್ ಡೌನ್, ಜ.25ವರೆಗೆ ರಜೆ ಘೋಷಿಸಿದ ಪ್ರಾಂಶುಪಾಲ…

ಅರೋಗ್ಯ ಕೋರೊನ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ

ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಕೋವಿಡ್ ಸೋಂಕು, ಕಾಲೇಜ್ ಸೀಲ್ ಡೌನ್, ಜ.25ವರೆಗೆ ರಜೆ ಘೋಷಿಸಿದ ಪ್ರಾಂಶುಪಾಲ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಸಾವಿರಾರು ವಿದ್ಯಾರ್ಥಿನಿಯರಿಂದ ಸದಾ ಗಿಜಿಗುಡುತ್ತಿದ್ದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆರು ಕೋವಿಡ್ ಪ್ರಕರಣಗಳು ದೃಢಪಟ್ಟಿರುವುದರಿಂದ ಜ.೨೧ ರಿಂದ ೨೫ ರವರೆಗೆ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಭಾರೆ ಪ್ರಾಚಾರ್ಯರಾದ ಸಣ್ಣಪ್ಪ ತಿಳಿಸಿದ್ದಾರೆ.
ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಸೇರಿದಂತೆ ಆರು ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳು ಸರ್ಕಾರದ ಮಾರ್ಗಸೂಚಿಯಂತೆ ಸೂಕ್ಷ್ಮ ಸೋಂಕಿತ ವಲಯವೆಂದು ನಿರ್ಧರಿಸಿರುವುದರಿಂದ ಕಾಲೇಜಿನ ವಿದ್ಯಾರ್ಥಿನಿಯರು, ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ಸಮುದಾಯದ ಆರೋಗ್ಯದ ಹಿತದೃಷ್ಟಿಯಿಂದ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಪ್ರಭಾರೆ ಪ್ರಾಚಾರ್ಯರಾದ ಸಣ್ಣಪ್ಪ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

What’s your Reaction?
+1
0
+1
0
+1
0
+1
0
+1
1
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply