ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿದೆ.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವೇಗೌಡರು, ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಂದರೆ ಕೊರೊನಾ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ಸದ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನೆಲೆ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
What’s your Reaction?
+1
+1
+1
+1
+1
+1
+1