ಜ.25ರಂದು ಮಂಗಳವಾರ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಉಚಿತ ಲಸಿಕಾ ಕಾರ್ಯಕ್ರಮ…

ಅರೋಗ್ಯ ಕೋರೊನ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಸಾಧನೆ

ಜ.25ರಂದು ಮಂಗಳವಾರ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಉಚಿತ ಲಸಿಕಾ ಕಾರ್ಯಕ್ರಮ…

ಚಿತ್ರದುರ್ಗ,ಜನವರಿ24:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಕ್ಲಬ್ ಚಿತ್ರದುರ್ಗ ಪೋರ್ಟ್, ಇನ್ನರ್ ವೀಲ್‍ಕ್ಲಬ್ ಚಿತ್ರದುರ್ಗ ಫೋರ್ಟ್ ಇವರ ಸಂಯುಕ್ತಾಶ್ರಯದಲ್ಲಿ ಜನವರಿ 25ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಚಿತ್ರದುರ್ಗದ ಮೆದೇಹಳ್ಳಿ ರಸ್ತೆಯ ಮರುಳಪ್ಪ ಬಡಾವಣೆಯ ವೈ.ಆರ್.ಆದಿಶೇಷ ರೋಟರಿ ಭವನದಲ್ಲಿ ಕೋವಿಡ್-19 ಉಚಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
60 ವರ್ಷ ಮೇಲ್ಪಟ್ಟ ವಯಸ್ಸಿನವರು ಎರಡನೇ ಡೋಸ್ ಲಸಿಕೆ ಪಡೆಯಲು ಕೋವಿಡ್ ಫೋರ್ಟ್‍ಲ್‍ನಿಂದ ಮೇಸೆಜ್ ಬಂದಿರಬೇಕು. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆ ಮತ್ತು 15 ರಿಂದ 17 ವರ್ಷದ ವಿದ್ಯಾರ್ಥಿಗಳು ಮತ್ತು ಕಾಲೇಜುಗಳಿಂದ ಹೊರುಗಳಿದವರಿಗೆ ಮೊದಲನೇ ಡೋಸ್ ಲಸಿಕೆ ನೀಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದು.

What’s your Reaction?
+1
0
+1
0
+1
0
+1
0
+1
0
+1
0
+1
0