ಬುಧವಾರದ ಹೆಲ್ತ್ ಬುಲೆಟಿನ್, ಜಿಲ್ಲೆಯ ಯಾವ ತಾಲೂಕುಗಳಲ್ಲಿ ಎಷ್ಟು ಕೋವಿಡ್ ಸೋಂಕು ದೃಢ…?

ಅರೋಗ್ಯ ಕೋರೊನ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ

ಬುಧವಾರದ ಹೆಲ್ತ್ ಬುಲೆಟಿನ್, ಜಿಲ್ಲೆಯ ಯಾವ ತಾಲೂಕುಗಳಲ್ಲಿ ಎಷ್ಟು ಕೋವಿಡ್ ಸೋಂಕು ದೃಢ…?

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 445 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 42,046ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 214, ಚಳ್ಳಕೆರೆ 47, ಹಿರಿಯೂರು 34, ಹೊಳಲ್ಕೆರೆ 56, ಹೊಸದುರ್ಗ 52 ಹಾಗೂ ಮೊಳಕಾಲ್ಮುರು 42 ಪ್ರಕರಣ ಸೇರಿದಂತೆ ಒಟ್ಟು 246 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 895 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬುಧವಾರ ಒಟ್ಟು 1442 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ಕೋವಿಡ್‍ನಿಂದ  ಬುಧವಾರದವರೆಗೆ ಒಟ್ಟು 216 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 39,165 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 2665 ಸಕ್ರಿಯ ಪ್ರಕರಣಗಳು ಇವೆ. ಬುಧವಾರದ ಪಾಸಿಟಿವ್ ರೇಟ್ 30.85 ಇದ್ದು, ಕಳೆದ ಹತ್ತು ದಿನಗಳ ಪಾಸಿಟಿವ್ ರೇಟ್ 18.38 ಇದೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,97,170 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

  ಈವರೆಗೆ 9,57,763 ಜನರ ಮಾದರಿ ಸಂಗ್ರಹಿಸಲಾಗಿದ್ದು, 9,13,855 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 996 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0