ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಮಂಜುಳ ಇನ್ನಿಲ್ಲ, ಆಡಳಿತ ಮಂಡಳಿಯಿಂದ ಸಂತಾಪ…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ವಿಶೇಷ ಸುದ್ದಿ ಸಾಧನೆ

ಸಂಯುಕ್ತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಮಂಜುಳ ಇನ್ನಿಲ್ಲ, ಆಡಳಿತ ಮಂಡಳಿಯಿಂದ ಸಂತಾಪ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

 ನಗರದ ಶ್ರೀ ಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ  ಮಂಜುಳ(55) ಶುಕ್ರವಾರ ರಾತ್ರಿ ನಿಧನರಾದರು. ಇವರ ಪತಿ ನಿವೃತ್ತ ಪ್ರಾಂಶುಪಾಲರು ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ನೆರವೇರಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಎಸ್.ಜೆ.ಎಂ ವಿದ್ಯಾಪೀಠದ ಅಧ್ಯಕ್ಷರು, ವಿದ್ಯಾಪೀಠದ ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಮೃತರ ಕುಟುಂಬದವರಿಗೆ ಅವರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಬಸವಾದಿ ಪ್ರಮಥರು ನೀಡಲಿ ಎಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0