ಭಾನುವಾರದ ಹೆಲ್ತ್ ಬುಲೆಟಿನ್, ಜಿಲ್ಲೆಯಲ್ಲಿ ಕೋವಿಡ್ ಮರಣ ಮೃದಂಗ, ಒಂದೇ ದಿನ ಮೂರು ಮಂದಿ ಸಾವು, ಸಾವಿನ ಸಂಖ್ಯೆ221ಕ್ಕೆ ಏರಿಕೆ..?

ಅರೋಗ್ಯ ಕೋರೊನ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ

ಭಾನುವಾರದ ಹೆಲ್ತ್ ಬುಲೆಟಿನ್, ಜಿಲ್ಲೆಯಲ್ಲಿ ಕೋವಿಡ್ ಮರಣ ಮೃದಂಗ, ಒಂದೇ ದಿನ ಮೂರು ಮಂದಿ ಸಾವು, ಸಾವಿನ ಸಂಖ್ಯೆ221ಕ್ಕೆ ಏರಿಕೆ..?

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆರ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 360 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 43,193ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 181, ಚಳ್ಳಕೆರೆ 59, ಹಿರಿಯೂರು 64, ಹೊಳಲ್ಕೆರೆ 13, ಹೊಸದುರ್ಗ 20 ಹಾಗೂ ಮೊಳಕಾಲ್ಮುರು 23 ಪ್ರಕರಣ ಸೇರಿದಂತೆ ಒಟ್ಟು 360 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 378 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 988 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಕೋವಿಡ್ ನಿಂದಾಗಿ ಭಾನುವಾರ ಮೂರು ಮಂದಿ ಮೃತಪಟ್ಟಿದ್ದು ಇದುವರೆಗೆ ಒಟ್ಟು 221 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 40,612 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 2360 ಸಕ್ರಿಯ ಪ್ರಕರಣಗಳು ಇವೆ. ಭಾನುವಾರದ ಪಾಸಿಟಿವ್ ರೇಟ್ 36.43 ಇದ್ದು, ಕಳೆದ ಹತ್ತು ದಿನಗಳ ಪಾಸಿಟಿವ್ ರೇಟ್ 18.81 ಇದೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,97,170 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 9,66,281 ಜನರ ಮಾದರಿ ಸಂಗ್ರಹಿಸಲಾಗಿದ್ದು, 9,21,622 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 600 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply