ಫೆ.04ರಂದು ಶುಕ್ರವಾರ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಉದ್ಘಾಟನೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಎನ್ಸಿಡಿ ಕೋಶ, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಫೆ.04ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಆರೈಕೆಯ ಅಂತರವನ್ನು ಕಡಿತಗೊಳಿಸಿ ಎಂಬ ಘೋಷ ವಾಕ್ಯದೊಂದಿಗೆ ಜಿಲ್ಲಾ ಹಾಗೂ ತಾಲ್ಲೂಕಿನಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ.
30 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರಿಗೂ ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಹಾಗೂ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ತಿಳಿಸಿದ್ದಾರೆ.
What’s your Reaction?
+1
+1
+1
+1
+1
+1
+1