ಶನಿವಾರದ ಹೆಲ್ತ್ ಬುಲೆಟಿನ್, ಜಿಲ್ಲೆಯಲ್ಲಿ ಮತ್ತೆ ಏರಿಕೆಯಾದ ಕೋವಿಡ್ ಸೋಂಕು…?

ಅರೋಗ್ಯ ಕೋರೊನ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ

ಶನಿವಾರದ ಹೆಲ್ತ್ ಬುಲೆಟಿನ್, ಜಿಲ್ಲೆಯಲ್ಲಿ ಮತ್ತೆ ಏರಿಕೆಯಾದ ಕೋವಿಡ್ ಸೋಂಕು…?

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆರ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 436 ಮಂದಿಗೆ ಸೋಂಕು ಇರುವುದು ದೃಢಪಟ್ಟಿದ್ದು ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45,001ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 167, ಚಳ್ಳಕೆರೆ 65, ಹಿರಿಯೂರು 79, ಹೊಳಲ್ಕೆರೆ 52, ಹೊಸದುರ್ಗ 54 ಹಾಗೂ ಮೊಳಕಾಲ್ಮುರು 19 ಪ್ರಕರಣ ಸೇರಿದಂತೆ ಒಟ್ಟು 436 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 705 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶನಿವಾರ ಒಟ್ಟು 2104 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಕೋವಿಡ್ ನಿಂದಾಗಿ ಶನಿವಾರ ಒಬ್ಬರು ಮೃತಪಟ್ಟಿದ್ದು ಇದುವರೆಗೆ ಒಟ್ಟು 223 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 42,743 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 2035 ಸಕ್ರಿಯ ಪ್ರಕರಣಗಳು ಇವೆ. ಗುರುವಾರದ ಪಾಸಿಟಿವ್ ರೇಟ್ 20.72 ಇದ್ದು, ಕಳೆದ ಹತ್ತು ದಿನಗಳ ಪಾಸಿಟಿವ್ ರೇಟ್ 12.07 ಇದೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,97,170 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 9,78,268 ಜನರ ಮಾದರಿ ಸಂಗ್ರಹಿಸಲಾಗಿದ್ದು, 9,31,033 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1368 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ ತಿಳಿಸಿದ್ದಾರೆ.

 

 

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply