ಜೀವನ ಶೈಲಿ ಬದಲಾವಣೆಯಿಂದ ಸದೃಢ ಆರೋಗ್ಯ-ಎನ್.ಎಸ್.ಮಂಜುನಾಥ್….

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ವಿಶೇಷ ಸುದ್ದಿ

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಸಲಹೆ
ಜೀವನ ಶೈಲಿ ಬದಲಾವಣೆಯಿಂದ ಸದೃಢ ಆರೋಗ್ಯ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪೌಷ್ಠಿಕ ಆಹಾರ ಹಾಗೂ ದೈಹಿಕ ಚಟುವಟಿಕೆಗಳ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಸಲಹೆ ನೀಡಿದರು.
ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಾರ್ವಜನಿಕರು ಮತ್ತು ತಾಯಂದಿರುಗಳಿಗೆ ಅಸಾಂಕ್ರಾಮಿಕ ರೋಗಗಳ ಕುರಿತು ಕರಪತ್ರ ಹಂಚಿಕೆ ಮಾಡಿ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಣ್ಣಬಣ್ಣದ ಆಹಾರ ಪದಾರ್ಥಗಳಿಗೆ ಮಾರುಹೋಗದೆ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುತ್ತಾ, ಯಾಂತ್ರಿಕ ಬದುಕಿನೊಂದಿಗೆ ಗೃಹಿಣಿಯರು ಮನೆಯ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬೇಕು. ಮಧುಮೇಹ, ರಕ್ತದ ಒತ್ತಡ, ಕ್ಯಾನ್ಸರ್, ಮತ್ತಿತರ ಅಸಾಂಕ್ರಾಮಿಕ ರೋಗಗಳು ಬಾರದಂತೆ ಜೀವನಶೈಲಿ ಬದಲಾವಣೆ ಮಾಡಿಕೊಳ್ಳುವುದರ ಮೂಲಕ ಉತ್ತಮ ಆರೋಗ್ಯ ಹೊಂದಬಹುದು ಎಂದರು.
 ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿ, ನಾರಿನಂಶವಿರುವ ಆಹಾರ ಪದಾರ್ಥಗಳ ಬಳಕೆ, ಶುದ್ಧ ಕುಡಿಯುವ ನೀರು, ಬಿಸಿಯಾದ ಆಹಾರ ಪದಾರ್ಥ ಸೇವಿಸಿ. ರೆಡಿಮೇಡ್ ಪದಾರ್ಥಗಳಿಗೆ ಕಡಿವಾಣ ಹಾಕಿ, ವೈಯಕ್ತಿಕ ಸ್ವಚ್ಛತೆ, ಪರಿಸರ ಸ್ವಚ್ಛತೆ ಕಾಪಾಡಿ ಕೊಂಡು ಸಣ್ಣಪುಟ್ಟ ಕಾರ್ಯಚಟುವಟಿಕೆಗಳಲ್ಲಿ ತೊಡಗಿ ಆರೋಗ್ಯವನ್ನು ಸರ್ವರು ವೃದ್ಧಿಸಿಕೊಳ್ಳಬೇಕು ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಾರುತಿ ಪ್ರಸಾದ್ ಮಾತನಾಡಿ, ಕ್ಷಯರೋಗ ಒಂದು ಬ್ಯಾಕ್ಟೀರಿಯಾದಿಂದ ಬರುವ ಸಾಂಕ್ರಾಮಿಕ ರೋಗ. ಎರಡು ವಾರಕ್ಕಿಂತ ಹೆಚ್ಚು ಕೆಮ್ಮು, ಕಫ ಇದ್ದಲ್ಲಿ ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಕಫ ಪರೀಕ್ಷೆ ಮಾಡಿಸಿ, ರೋಗ ದೃಢಪಟ್ಟಲ್ಲಿ ಆರೋಗ್ಯ ಇಲಾಖಾ ಕಾರ್ಯಕರ್ತರಿಂದ ಉಚಿತ ಔಷಧಿ ವಿತರಿಸಲಾಗುವುದು. ಮನೆಯಲ್ಲಿದ್ದುಕೊಂಡೇ ರೋಗಿ ಚಿಕಿತ್ಸೆ ಪಡೆಯಬಹುದು ಎಂದರು. ಚಿಕಿತ್ಸಾ ಅವಧಿಯಲ್ಲಿ ಸರ್ಕಾರವು ರೋಗಿಯ ಬ್ಯಾಂಕ್ ಖಾತೆಗೆ ೫೦೦ ರೂಪಾಯಿಗಳನ್ನು ಪೌಷ್ಟಿಕ ಆಹಾರ ಸೇವನೆಗಾಗಿ ಉಚಿತವಾಗಿ ಒದಗಿಸುತ್ತಿದ್ದು ಇದರ ಸದುಪಯೋಗ ಪಡೆದುಕೊಂಡು ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆದಲ್ಲಿ ರೋಗಿ ಸಂಪೂರ್ಣ ಗುಣಮುಖ ಹೊಂದಬಹುದು ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆಂಜನೇಯ, ಮಾರುತಿ ಹಿರಿಯ ಕ್ಷಯರೋಗ ಪ್ರಯೋಗಶಾಲಾ ಮೇಲ್ವಿಚಾರಕರು, ಅಂಗನವಾಡಿ ಮೇಲ್ವಿಚಾರಕಿ ಜೈ ತುಂಬಿ. ಶಾಲಾ ಮುಖ್ಯಶಿಕ್ಷಕಿ ಗೌರಮ್ಮ, ಆರ್.ಕೆ.ಎಸ್.ಕೆ ಸಂಯೋಜಕರಾದ ಸುಶೀಲಾ, ಸಮುದಾಯ ಆರೋಗ್ಯ ಅಧಿಕಾರಿ ಪ್ರತಿಭಾ, ಅಂಗನವಾಡಿ ಕಾರ್ಯಕರ್ತೆ ಧರ್ಮವತಿ, ಸಾರ್ವಜನಿಕರು ಮತ್ತು ತಾಯಿಯರು ಭಾಗವಹಿಸಿದ್ದರು

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply