ವಿಧಾನಸಭಾ ಚುನಾವಣೆ ದೃಷ್ಠಿಯಿಂದ ಸದಸ್ಯತ್ವ ಅಭಿಯಾನಕ್ಕೆ ಹೆಚ್ಚಿನ ಒತ್ತು ನೀಡಿ-ಮಾಜಿ ಸಚಿವ ಎಂ.ಆರ್.ಸೀತಾರಾಂ…

ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ರಾಜಕೀಯ

ವಿಧಾನಸಭಾ ಚುನಾವಣೆ ದೃಷ್ಠಿಯಿಂದ ಸದಸ್ಯತ್ವ ಅಭಿಯಾನಕ್ಕೆ ಹೆಚ್ಚಿನ ಒತ್ತು ನೀಡಿ-ಮಾಜಿ ಸಚಿವ ಎಂ.ಆರ್.ಸೀತಾರಾಂ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಡಿಜಿಟಲ್ ಸದಸ್ಯತ್ವದ ನೊಂದಣಿ ಅಭಿಯಾನ ಅತ್ಯಂತ ಮಹತ್ವದ್ದಾಗಿರುವುದರಿಂದ ನೊಂದಣಿ ಕಾರ್ಯವನ್ನು ಬೇಗನೆ ಮುಗಿಸುವಂತೆ ಮಾಜಿ ಮಂತ್ರಿ ಎಂ.ಆರ್.ಸೀತಾರಾಂ ಕಾರ್ಯಕರ್ತರಿಗೆ ಹಾಗೂ ಮುಖಂಡರುಗಳಿಗೆ ತಾಕೀತು ಮಾಡಿದರು.
ನಗರದ ದಾವಣಗೆರೆ ರಸ್ತೆಯಲ್ಲಿರುವ ಎನ್.ಬಿ.ಟಿ.ಜಮೀರ್ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವದ ಅಭಿಯಾನ ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಹೆಚ್ಚಿನ ಮಹತ್ವವಿದ್ದು, ಚುನಾವಣೆಗೆ ಇನ್ನು ಒಂದು ವರ್ಷಗಳ ಕಾಲವಿರುವುದರಿಂದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸದಸ್ಯತ್ವ ಅಭಿಯಾನಕ್ಕೆ ಒತ್ತು ಕೊಟ್ಟು ಕೆಲಸ ಮಾಡಬೇಕಿದೆ. ಇದು ಪಕ್ಷದ ಪ್ರಮುಖ ಗುರಿಯಾಗಿರುವುದರಿಂದ ವಿಳಂಭವಾಗಬಾರದು. ಕೇಂದ್ರ ಹಾಗೂ ರಾಜ್ಯದಲ್ಲಿ ಪಕ್ಷ ಅಧಿಕಾರ ಕಳೆದುಕೊಂಡಿರುವುದರಿಂದ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವು ತಂದುಕೊಡಲು ಅಭಿಯಾನ ಸಹಕಾರಿಯಾಗಲಿದೆ ಎಂದು ಹೇಳಿದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ ಜಾತಿ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವ ಕೋಮುವಾದಿ ಬಿಜೆಪಿ.ಯವರು ಈಗ ವಿದ್ಯಾರ್ಥಿಗಳಲ್ಲಿಯೂ ವಿಷ ಬೀಜ ಬಿತ್ತುತ್ತಿದ್ದಾರೆ. ಮೂರು ಬಾಂಬ್ ಹಾಕಿ ಮುನ್ನೂರು ಪಾರ್ಲಿಮೆಂಟ್ ಸೀಟುಗಳನ್ನು ಗೆದ್ದಿದ್ದಾರೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ದೇಶಕ್ಕೆ ಕಾಂಗ್ರೆಸ್ ಬೇಕಾಗಿದೆ. ಇಲ್ಲದಿದ್ದರೆ ದೇಶ, ಸಂವಿಧಾನ ಉಳಿಯುವುದಿಲ್ಲ. ಬಿಜೆಪಿ.ಗೆ ಸಂವಿಧಾನದ ಅರ್ಥವೇ ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಈಗ ಎದೆಗುಂದದೆ ನಿಲ್ಲಬೇಕು. ಪೌರ ಕಾರ್ಮಿಕರ ಪಾದತೊಳೆಯುವ ಬಿಜೆಪಿ.ಯವರು ಮೇಲ್ವರ್ಗದವರಿಗೆ ಶೇ.೧೦ ರಷ್ಟು ಮೀಸಲಾತಿ ನೀಡಿದ್ದಾರೆ. ಸಂವಿಧಾನ ಬಾಹಿರ ಕೆಲಸಗಳು ಸಾಕಷ್ಟು ನಡೆದಿದೆ. ಮನೆ ಮನೆಗೆ ಹೋಗಿ ಕಾಂಗ್ರೆಸ್ ಪಕ್ಷದ ಸಿದ್ದಾಂತ ಹೇಳಿ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಆದ್ಯತೆ ಕೊಡಿ ಎಂದು ಕಾರ್ಯಕರ್ತರಿಗೆ ಸೂಚಿಸಿದರು.
ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನದ ವೀಕ್ಷಕಿ ಕವಿತಾರೆಡ್ಡಿ ಮಾತನಾಡುತ್ತ ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ದ ಹೋರಾಡುವಲ್ಲಿ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ಪಕ್ಷ ಈಗ ಅಮೃತ ಸ್ವಾತಂತ್ರ್ಯೋತ್ಸವದ ನೆನಪಿಗಾಗಿ ಡಿಜಿಟಲ್ ಸದಸ್ಯತ್ವ ನೊಂದಣಿ ಅಭಿಯಾನ ದೇಶಾದ್ಯಂತ ಹಮ್ಮಿಕೊಂಡಿದೆ. ಪಕ್ಷದ ಇತಿಹಾಸವನ್ನು ಪ್ರತಿಯೊಬ್ಬರು ತಿಳಿದುಕೊಂಡಾಗ ಮಾತ್ರ ವಿರೋಧಿಗಳ ಟೀಕೆಗಳಿಗೆ ಉತ್ತರ ಕೊಡಲು ಸುಲಭವಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಜಾತಿ ಧರ್ಮದ ಮೇಲೆ ಮತ ಕೇಳಲ್ಲ, ಹಿಜಾಬ್ ಬಗ್ಗೆ ಮಾತನಾಡುತ್ತಿಲ್ಲ. ಯುವಕರು ಮಹಿಳೆಯರನ್ನು ಹೆಚ್ಚು ಹೆಚ್ಚಾಗಿ ಪಕ್ಷಕ್ಕೆ ಸದಸ್ಯರನ್ನಾಗಿ ನೊಂದಾಯಿಸಿಕೊಳ್ಳಿ. ಪ್ರತಿಯೊಂದು ಬೂತ್‌ಗೂ ಹೋಗಿ ಎಲ್ಲರನ್ನು ಸದಸ್ಯತ್ವ ನೊಂದಣಿ ಮಾಡಿಕೊಳ್ಳುವಂತೆ ಕೇಳಿ. ಪಕ್ಷದ ಎಲ್ಲಾ ವಿಭಾಗಗಳಿಂದಲೂ ಡಿಜಿಟಲ್ ಸದಸ್ಯತ್ವ ನೊಂದಣಿಯಾಗಬೇಕು. ಸಾಮಾಜಿಕ ಜಾಲತಾಣವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಿ. ಎಲ್ಲಾ ಜಾತಿ ಧರ್ಮದವರನ್ನು ಪಕ್ಷಕ್ಕೆ ಸೆಳೆಯುವ ಕೆಲಸ ಮಾಡಿ ಮುಂದಿನ ಚುನಾವಣೆಯಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತನ್ನಿ ಎಂದು ತಿಳಿಸಿದರು.
ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ ಮೊಬೈಲ್ ಮೂಲಕ ಸದಸ್ಯತ್ವ ಮಾಡುವುದು ತುಂಬಾ ಸರಳವಾಗಿದೆ. ಎ.ಐ.ಸಿ.ಸಿ.ಮತ್ತು ಕೆ.ಪಿ.ಸಿ.ಸಿ. ಸೇರಿ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೊಂದಣಿಗೆ ಚಾಲನೆ ನೀಡಿದೆ. ಕೋಮುವಾದಿ ಬಿಜೆಪಿ.ಯ ದುರಾಡಳಿತದಿಂದ ದೇಶದ ಜನ ಬೇಸತ್ತು ಕಾಂಗ್ರೆಸ್ ಬಯಸುತ್ತಿರುವುದರಿಂದ ಸದಸ್ಯತ್ವ ಅಭಿಯಾನಕ್ಕೆ ಪ್ರಾಮುಖ್ಯತೆ ನೀಡಿ. ಪ್ರಧಾನಿ ಮೋದಿ ಸರ್ಕಾರ ಬಡವರ ಮನೆಯನ್ನು ಕತ್ತಲು ಮಾಡಿ ಅದಾನಿ, ಅಂಬಾನಿಯವರ ಪರವಾಗಿ ನಿಂತಿದ್ದಾರೆ. ಕೋವಿಡ್‌ನಿಂದ ದೇಶದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ. ಸಿದ್ದರಾಮಯ್ಯನವರ ಆಳ್ವಿಕೆ ಸುವರ್ಣಯುಗವಾಗಿತ್ತು. ಈ ಹಿಂದೆ ಹಿಜಾಬ್ ತಕರಾರು ಇರಲಿಲ್ಲ.
ಕೋಮುವಾದಿ ಬಿಜೆಪಿ.ಯವರು ವಿದ್ಯಾರ್ಥಿಗಳ ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಬೆಲೆ ಏರಿಕೆ ಬಿಸಿ ಎಲ್ಲರಿಗೂ ತಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಮನೆ ಮನೆಗೆ ಕಾಂಗ್ರೆಸ್ ಜನಪರ ಕೊಡುಗೆಗಳು ಹಾಗೂ ಬಿಜೆಪಿ.ಯ ಜನವಿರೋಧಿ ನೀತಿಯನ್ನು ತಿಳಿಸಿ ಪಕ್ಷ ಸಂಘಟಿಸಿ ಎಂದರು.
ಡಿಜಿಟಲ್ ಸದಸ್ಯತ್ವ ಅಭಿಯಾನದ ವೀಕ್ಷಕರುಗಳಾದ ಡಾ.ರಾಘವೇಂದ್ರ, ಸಂತೋಷ್, ಅಭಿಜಿತ್, ಸುಮಯ್ಯ ತಬ್ರೇಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಮಾಜಿ ಸಚಿವ ಡಿ.ಸುಧಾಕರ್, ಮಾಜಿ ಶಾಸಕರುಗಳಾದ ತಿಪ್ಪೇಸ್ವಾಮಿ, ಎ.ವಿ.ಉಮಾಪತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಯೋಗೇಶ್‌ಬಾಬು, ಕೆ.ಪಿ.ಸಿ.ಸಿ.ಸದಸ್ಯ ಹನುಮಲಿ ಷಣ್ಮುಖಪ್ಪ, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸದಸ್ಯ ಕೆ.ಅನ್ವರ್‌ಭಾಷ, ವಿಧಾನಪರಿಷತ್ ಮಾಜಿ ಸದಸ್ಯೆ ಜಯಮ್ಮ ಬಾಲರಾಜ್, ಲಿಡ್ಕರ್ ಮಾಜಿ ಚೇರ್ಮನ್ ಓ.ಶಂಕರ್, ಎನ್.ಬಿ.ಟಿ.ಜಮೀರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‌ಕುಮಾರ್, ಡಿ.ಎನ್.ಮೈಲಾರಪ್ಪ, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ಕುಮಾರ್‌ಗೌಡ, ರವಿಕುಮಾರ್, ಅನಿಲ್, ಮುನಿರಾ ಎ.ಮಕಾಂದಾರ್, ಮೋಕ್ಷರುದ್ರಸ್ವಾಮಿ ಇನ್ನು ಮೊದಲಾದವರು ವೇದಿಕೆಯಲ್ಲಿದ್ದರು.

 

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply