ಐದು ಲಕ್ಷ ಸಂಪೂರ್ಣ ಉಚಿತ, ಆಯುಷ್ಮಾನ್ ಕಾರ್ಡ್ ಮಾಡಿಸಿ, ಗಂಭೀರ ಕಾಯಿಲೆಗಳಿಗೆ ಉಚಿತ ವೈದ್ಯಕೀಯ ವೆಚ್ಚ ಪಡೆದುಕೊಳ್ಳಿ…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ

ಐದು ಲಕ್ಷ ಸಂಪೂರ್ಣ ಉಚಿತ, ಆಯುಷ್ಮಾನ್ ಕಾರ್ಡ್ ಮಾಡಿಸಿ, ಗಂಭೀರ ಕಾಯಿಲೆಗಳಿಗೆ ಉಚಿತ ವೈದ್ಯಕೀಯ ವೆಚ್ಚ ಪಡೆದುಕೊಳ್ಳಿ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದೆ ಎ.ಪಿ.ಎಲ್, ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಎಲ್ಲರೂ ಈ ಕಾರ್ಡ್ ಮಾಡಿಸಿ ಉಚಿತ ವೈದ್ಯಕೀಯ ವೆಚ್ಚ ಪಡೆದುಕೊಳ್ಳುವಂತೆ ಚಿತ್ರದುರ್ಗ ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಸಲಹೆ ನೀಡಿದರು.
 ಚಿತ್ರದುರ್ಗ ತಾಲ್ಲೂಕಿನ ಪಂಡರಹಳ್ಳಿ ಪ್ರಾಥಮಿಕ ಕೇಂದ್ರದ ಆವರಣದಲ್ಲಿ ಸೋಮವಾರ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಪಡೆದು ಉಪಯೋಗಿಸುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.  
 ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್‍ಗಳನ್ನು ಸಮುದಾಯ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯತಿ, ಜಿಲ್ಲಾ  ಆಸ್ಪತ್ರೆಯಲ್ಲಿ  ಕಾರ್ಡ್ ಮಾಡಿಕೊಡಲಾಗುತ್ತದೆ. ಶಸ್ತ್ರಚಿಕಿತ್ಸೆ, ಗಂಭೀರ ಸ್ವರೂಪದ ಕಾಯಿಲೆಗಳ ವೆಚ್ಚ ಭರಿಸಲು ಸರ್ಕಾರ ವಿಮೆಯ ಮೂಲಕ ಪಾವತಿಸುತ್ತದೆ . ಇದರ ಸದುಪಯೋಗವನ್ನು ಸಾರ್ವಜನರಿಗೆ ಪಡೆದುಕೊಳ್ಳಿ ಎಂದರು.
ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿ, ಈ ಯೋಜನೆಯಡಿಯಲ್ಲಿ ಪ್ರಾಥಮಿಕ, ದ್ವಿತೀಯ, ಸಂಕೀರ್ಣ ದ್ವಿತೀಯ, ತೃತೀಯ ಹಂತದ ಮತ್ತು ತುರ್ತು ಚಿಕಿತ್ಸಾ ಹಂತದ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಅರ್ಹತಾ ರೋಗಿಗಳು, ಸಾಮಾನ್ಯ ರೋಗಿಗಳು ಎಂದು ಎರಡು ವರ್ಗಗಳಾಗಿ ರೋಗಿಗಳನ್ನು ಗುರುತಿಸಲಾಗುತ್ತದೆ ಎಂದರು.
 ಅರ್ಹತಾ ರೋಗಿಗಳಿಗೆ ಒಂದು ವರ್ಷಕ್ಕೆ ರೂ.5.00 ಲಕ್ಷಗಳವರೆಗೆ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಸಾಮಾನ್ಯ ರೋಗಿಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30ರಷ್ಟು ರಿಯಾಯಿತಿ ನೀಡಿ ಸಹ ಪಾವತಿಯೊಂದಿಗೆ ಗರಿಷ್ಟ ವರ್ಷಕ್ಕೆ 1.50 ಲಕ್ಷದಷ್ಟು ವೈದ್ಯಕೀಯ ವೆಚ್ಚ ಭರಿಸಲಾಗುತ್ತದೆ ಎಂದು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ಅಕ್ಷತಾ ಮಾತನಾಡಿ, ನೀವು ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬರುವಾಗ ಆಯುಷ್ಮಾನ್ ಕಾರ್ಡ್ ಅನ್ನು ತಪ್ಪದೇ ತನ್ನಿ. ಒಂದುವೇಳೆ ನೀವು ಕಾರ್ಡ್ ಪಡೆಯದಿದ್ದರೆ ಇಂದೇ ಕಾರ್ಡ್ ಮಾಡಿಸಿಕೊಳ್ಳಿ. ಇದರಿಂದ ನಿಮ್ಮ ಚಿಕಿತ್ಸಾ ವೆಚ್ಚವಷ್ಟೇ ಅಲ್ಲದೆ ಆಸ್ಪತ್ರೆ ಅಭಿವೃದ್ಧಿಗೂ ಸಹಕಾರಿಯಾಗಿದೆ ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಪುರುಷರ ಸಹಭಾಗಿತ್ವ ಈ ದಿನಗಳಲ್ಲಿ ಅನಿವಾರ್ಯವಾಗಿದೆ. ಪುರುಷರಿಗಾಗಿ ಎನ್‍ಎಸ್‍ವಿ ವಿಧಾನ ಸರಳ ಸುಲಭವಾದ ವಿಧಾನವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀಧರ್, ಕೃಷ್ಣಪ್ಪ, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದೇಶ್, ರವಿ ಗಾಂಧಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply