ಕ್ಷಯರೋಗದ ಮುನ್ನೆಚ್ಚರಿಕೆ ಕ್ರಮಗಳು, ಕ್ಷಯ ರೋಗ ನಿರ್ಮೂಲನೆಗೆ ಸಮೂಹದ ಸಹಭಾಗಿತ್ವ ಅಗತ್ಯ: ಟಿಹೆಚ್‍ಓ ಡಾ.ಬಿ.ವಿ.ಗಿರೀಶ್…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ

ಕ್ಷಯರೋಗದ ಮುನ್ನೆಚ್ಚರಿಕೆ ಕ್ರಮಗಳು, ಕ್ಷಯ ರೋಗ ನಿರ್ಮೂಲನೆಗೆ ಸಮೂಹದ ಸಹಭಾಗಿತ್ವ ಅಗತ್ಯ: ಟಿಹೆಚ್‍ಓ ಡಾ.ಬಿ.ವಿ.ಗಿರೀಶ್…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025ರ ವೇಳೆಗೆ ಕ್ಷಯರೋಗವನ್ನು ನಿರ್ಮೂಲನೆ ಮಾಡುವ ಗುರಿಹೊಂದಿದ್ದು ಇದಕ್ಕೆ ಸಮುದಾಯದ ಸಹಭಾಗಿತ್ವ ಅತ್ಯಗತ್ಯವಾಗಿ ಬೇಕಾಗಿದ್ದು, ತಾವುಗಳೆಲ್ಲಾ ಸಹಕರಿಸಿ ಎಂದು  ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.
 ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಸಮೀಪದ ಕಾಲ್ಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಸಮೂಹ ಗೋಷ್ಠಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕ್ಷಯರೋಗ ವಿಭಾಗದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎ.ಮಾರುತಿಪ್ರಸಾದ್  ಮಾತನಾಡಿ, ಕ್ಷಯ ರೋಗಿಗಳು ಕೆಮ್ಮುವಾಗ ಮತ್ತು ಸೀನುವಾಗ ಕರವಸ್ತ್ರದಿಂದ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳಿ, ಸೋಪಿನಿಂದ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳಿ, ಎಲ್ಲೆಂದರಲ್ಲಿ ಕಫವನ್ನು ಉಗುಳಬೇಡಿ, ಗಾಳಿ, ಬೆಳಕು ಸರಾಗವಾಗಿ ಬರುವಂತೆ ಮಾಡಲು ಮನೆಗಳ ಕಿಟಕಿ ಬಾಗಿಲು ತೆರೆದಿಡಿ ಆಗ ಕ್ಷಯರೋಗ ನಿರ್ಮೂಲನೆಗೆ ಕಾಲ ಘಟಿಸುತ್ತಿದೆ ಎಂದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 10 ಕ್ಷಯರೋಗ ಪ್ರಕರಣಗಳು ಚಿಕಿತ್ಸೆಯಲ್ಲಿದೆ. ಕ್ಷಯರೋಗ ನಿರ್ಮೂಲನೆಗೆ ಶೀಘ್ರವಾಗಿ ರೋಗವನ್ನು ಪತ್ತೆ ಹಚ್ಚಿ, ತ್ವರಿತವಾಗಿ ಚಿಕಿತ್ಸೆ ನೀಡುವುದು ಹಾಗೂ  ಮುಂಜಾಗ್ರತಾ ಕ್ರಮಗಳ ಪಾಲನೆ ಅನುಕ್ರಮವಾಗಿ ಸಾಗಬೇಕು. ಹಾಗಾಗಿ ಎರಡು ವಾರಕ್ಕಿಂತ ಹೆಚ್ಚು ದಿನಗಳವರೆಗೆ ಕೆಮ್ಮು, ರಾತ್ರಿವೇಳೆ ಜ್ವರ, ಬೆವರುವುದು, ಕಫದಲ್ಲಿ ರಕ್ತ, ತೂಕ ಇಳಿಕೆ, ಹಸಿವಾಗದಿರುವುದು ಕಂಡುಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಕಫ ಪರೀಕ್ಷೆ ಮಾಡಿಸಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಫಾರ್ಮಸಿ ಅಧಿಕಾರಿ ಲೋಕೇಶ್, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಲಕ್ಷ್ಮಿದೇವಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ ಭಾಗವಹಿಸಿದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0