ಎಸ್.ಎಸ್.ನಾರಾಯಣ ಹಾರ್ಟ್ ಸೆಂಟರ್ ವತಿಯಿಂದ ಮಾ.19ರಂದು ಉಚಿತ ಹೃದ್ರೋಗ ತಪಾಸಣಾ ಶಿಬಿರ…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ

ಎಸ್.ಎಸ್.ನಾರಾಯಣ ಹಾರ್ಟ್ ಸೆಂಟರ್ ವತಿಯಿಂದ ಮಾ.19ರಂದು ಉಚಿತ ಹೃದ್ರೋಗ ತಪಾಸಣಾ ಶಿಬಿರ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಕೃತಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಎಸ್.ಎಸ್.ನಾರಾಯಣ ಹಾರ್ಟ್ ಸೆಂಟರ್ ದಾವಣಗೆರೆ ಹಾಗೂ ಕೀವ ಡಿಜಿಟಲ್ ವಲ್ರ್ಡ್ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವನ್ನು ಮಾರ್ಚ್ 19ರಂದು ಬೆಳಿಗ್ಗೆ 9.30ಕ್ಕೆ  ಚಿತ್ರದುರ್ಗ ವಿದ್ಯಾದಾನ ಸೌಧದ ಮಲ್ಟಿಪರ್ಪಸ್ ಹಾಲ್‍ನಲ್ಲಿ ಆಯೋಜಿಸಲಾಗಿದೆ.
 ಹೊಳಲ್ಕೆರೆ ಶಾಸಕರು ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ  ಕಾರ್ಯಕ್ರಮ ಉದ್ಘಾಟನೆ ನೆರವೇರಿಸುವರು.
 ಮುಖ್ಯ ಅತಿಥಿಗಳಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಂಗನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಹೆಚ್.ಜೆ. ಬಸವರಾಜಪ್ಪ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಎ.ಎಂ. ಸುರೇಶ್, ಜಿಲ್ಲಾ ಯೋಗ ಮತ್ತು ಕ್ರೀಡಾ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ಎಲ್.ಎಸ್.ಚಿನ್ಮಾಯಾನಂದ, ಸಮಾಜ ಸೇವಕಿ ಗಾಯತ್ರಿ  ಶಿವರಾಮ್, ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಹೆಚ್. ಚಂದ್ರಕಲಾ, ಮುಖ್ಯ ನಿರ್ವಾಹಣಾಧಿಕಾರಿ ಎಂ. ಸಿ. ರಘು ಚಂದನ್ ಭಾಗವಹಿಸುವರು. ಪ್ರಕೃತಿ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ  ಪ್ರಾಂಶುಪಾಲ ಡಾ.ಎಸ್.ಬಿ.ನವಾಜ್ ಅಹಮದ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply