ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಧಿಡೀರ್ ಭೇಟಿ ನೀಡಿ ಪರಿಶೀಲಿಸಿದ ಶಾಸಕಿ ಪೂರ್ಣಿಮಾಶ್ರೀನಿವಾಸ್…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ ಹಿರಿಯೂರು
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಧಿಡೀರ್ ಭೇಟಿ ನೀಡಿ ಪರಿಶೀಲಿಸಿದ ಶಾಸಕಿ ಪೂರ್ಣಿಮಾಶ್ರೀನಿವಾಸ್…
 
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳು ಜನರ ಆರೋಗ್ಯ ರಕ್ಷಣೆಗಾಗಿ ಇದ್ದು, ಆಸ್ಪತ್ರೆಗೆ ಬರುವ ರೋಗಿಗಳ ಯೋಗಕ್ಷೇಮ ವಿಚಾರಿಸಿ, ಅವರಿಗೆ ಸರಿಯಾದ ಚಿಕಿತ್ಸೆ ನೀಡುವುದು ಆಸ್ಪತ್ರೆಯ ವೈದ್ಯರ ಕರ್ತವ್ಯವಾಗಿದೆ, ಅದನ್ನು ಬಿಟ್ಟು ಹೀಗೆ ವಾರಕ್ಕೆ ಎರಡು ಬಾರಿ ಆಸ್ಪತ್ರೆಗೆ ಭೇಟಿ ನೀಡುವುದು ವೈದ್ಯರ ಬೇಜಾವಾಬ್ದಾರಿತನವನ್ನು ತೋರಿಸುತ್ತದೆ ಎಂಬುದಾಗಿ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ತಾಲ್ಲೂಕಿನ ವಾಣಿವಿಲಾಸಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾರ್ವಜನಿಕರ ಆರೋಪದ ಮೇರೆಗೆ ಶಾಸಕರು ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ ಅವರು ಮಾತನಾಡಿದರು.
ವಾಣಿವಿಲಾಸಪುರದಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಕರ್ತವ್ಯಕ್ಕೆ ಗೈರಾಗದೇ, ಸಾರ್ವಜನಿಕರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುವಂತೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ತಂಗವೇಲು, ಉಮೇಶ್, ಕಣುಮಯ್ಯ, ಯೋಗೇಶ್, ಮುನ್ನ ಮುಖಂಡರಾದ ವಿಶ್ವನಾಥ್, ಸೆಂಥಿಲ್, ನಾಗೇಶ್, ಜಯಣ್ಣ, ಕುಮಾರ್, ಶಾಂತಕುಮಾರ್, ನರಸಿಂಹರಾವ್ ಮುಂತಾದವರು ಉಪಸ್ಥಿತರಿದ್ದರು.
What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply