ಏ.18 ರಂದು ಕ್ಯಾನ್ಸರ್, ಪಿಬಿ-ಶುಗರ್, ದಂತ ತಪಾಸಣೆ, ಸ್ತ್ರೀ ಹಾಗೂ ಮಕ್ಕಳ ಆರೋಗ್ಯ ಸೇರಿದಂತೆ ವಿವಿಧ ರೋಗಗಳಿಗೆ ಉಚಿತ ತಪಾಸಣಾ ಶಿಬಿರ…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ

ಏ.18 ರಂದು ಕ್ಯಾನ್ಸರ್, ಪಿಬಿ-ಶುಗರ್, ದಂತ ತಪಾಸಣೆ, ಸ್ತ್ರೀ ಹಾಗೂ ಮಕ್ಕಳ ಆರೋಗ್ಯ ಸೇರಿದಂತೆ ವಿವಿಧ ರೋಗಗಳಿಗೆ ಉಚಿತ ತಪಾಸಣಾ ಶಿಬಿರ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏ.18 ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ತಜ್ಞ ವೈದ್ಯರು ಕ್ಯಾನ್ಸರ್, ಸಕ್ಕರೆ ಖಾಯಿಲೆ, ರಕ್ತದೊತ್ತಡ, ದಂತ ತಪಾಸಣೆ, ಸ್ತ್ರೀ ಹಾಗೂ ಮಕ್ಕಳ ಆರೋಗ್ಯ ಸೇರಿದಂತೆ ವಿವಿಧ ರೋಗಗಳಿಗೆ ತಪಾಸಣೆ ನಡೆಸಿ ಉಚಿತ ಚಿಕಿತ್ಸೆ ನೀಡುವರು. ಆಯುಷ್ ಚಿಕಿತ್ಸೆ, ಯೋಗ ಶಿಕ್ಷಣ, ಪ್ರಯೋಗಾಲಯ ಪರೀಕ್ಷೆಗಳು, ಪೌಷ್ಟಿಕ ಆಹಾರ ಶಿಬಿರ ಹಾಗೂ ಆರೋಗ್ಯ ಇಲಾಖೆಯಿಂದ ದೊರೆಯುವ ಸೇವಾ ಸೌಲಭ್ಯಗಳ ಮಾಹಿತಿ ಮೇಳದಲ್ಲಿ ನೀಡಲಾಗುವುದು. ಸ್ಥಳದಲ್ಲಿಯೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್‍ಗಳ ಮುದ್ರಣ ಮಾಡಿಕೊಡಲಾಗುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply