ಪ್ರತಿಯೊಬ್ಬ ಪ್ರಜೆಯೂ ಆರೋಗ್ಯವಾಗಿರಬೇಕೆಂದು ಸರ್ಕಾರ ಹಲವು ಯೋಜನೆ ಜಾರಿ ಮಾಡಿದೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ ವಿಶೇಷ ಸುದ್ದಿ

ಪ್ರತಿಯೊಬ್ಬ ಪ್ರಜೆಯೂ ಆರೋಗ್ಯವಾಗಿರಬೇಕೆಂದು ಸರ್ಕಾರ ಹಲವು ಯೋಜನೆ ಜಾರಿ ಮಾಡಿದೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಆರೋಗ್ಯವಾಗಿರಬೇಕು ಎಂಬ ದೃಷ್ಠಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಆರೋಗ್ಯ ಕ್ಷೇತ್ರದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು.
 ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಚಿತ್ರದುರ್ಗ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ, ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
 ಇದೊಂದು ವಿಷೇಶ ಮತ್ತು ಉಪಯುಕ್ತವಾದ ಮೇಳವಾಗಿದೆ. ಕೇಂದ್ರ ಸರ್ಕಾರವು ಬಡ ರೋಗಿಗಳ ಆರೋಗ್ಯ ವೆಚ್ಚವನ್ನು ಭರಿಸಲು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ 5 ಲಕ್ಷದವರೆಗೆ ಉಚಿತವಾದ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಪಡೆದುಕೊಳ್ಳವ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತೆ ಸೂಚಿಸಿದರು.
 ರೋಗಿಗಳು ಯುನಿಕ್ ಹಲ್ತ್ ಐಡಿ ಕಾರ್ಡ್‍ಗಳನ್ನು ಪಡೆದುಕೊಳ್ಳಬೇಕು. ಇದರಿಂದ ರೋಗಿಯ ಪ್ರಾಥಮಿಕ ಹಂತದಿಂದ ಕಂಡುಬಂದಿರುವ ರೋಗ ಲಕ್ಷಣಗಳನ್ನು ಈ ಕಾರ್ಡ್‍ಗಳಲ್ಲಿ ದಾಖಲಿಸಲಾಗುತ್ತೆದೆ. ಯುನಿಕ್ ಹಲ್ತ್ ಐಡಿ ಕಾರ್ಡ್‍ಗಳನ್ನು ಯಾವುದೇ ಆಸ್ಪತ್ರೆಗಳಲ್ಲಿ ತೋರಿಸುವುದರಿಂದ ರೋಗಿಯ ರೋಗದ ಸಂಪೂರ್ಣ ಮಾಹಿತಿ ಸಿಗುತ್ತದೆ. ಇದರಿಂದ ಸೂಕ್ತ ಚಿಕಿತ್ಸೆ ನೀಡಲು ಸಹಾಯಕಾರಿಯಾಗುತ್ತದೆ ಎಂದರು.
 ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಜನರು ಆರೋಗ್ಯವಾಗಿರುವಂತೆ ಮಾಡಲು ನಮ್ಮ ಕೇಂದ್ರ ಸರ್ಕಾರ ಅನೇಕ ಅನುಕೂಲಗಳನ್ನು ನೀಡಿದೆ. ಅನುಕೂಲಗಳನ್ನು ಬಳಸಿಕೊಂಡು ಆರೋಗ್ಯವಂತರಾಗಿ ದೇಶ ಸೇವೆ ಮಾಡುವಂತಹ ಪ್ರಜೆಗಳಾಗಿ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ರಂಗನಾಥ್ ಮಾತನಾಡಿ, ಮೇಳದಲ್ಲಿ ವಿಶೇಷವಾದ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ತಜ್ಞ ವೈದ್ಯರು ರೋಗಿಗಳ ತಪಾಸಣೆ  ನಡೆಸಿ ಸೂಕ್ತ ಚಿಕಿತ್ಸೆ ನೀಡುತ್ತಾರೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಮೇಳದಲ್ಲಿ ಉಚಿತ ಆರೋಗ್ಯ ಸೇವೆಗಳ ಜೊತೆಗೆ ಉಚಿತ ಪ್ರಯೋಗಾಲಯ ಪರೀಕ್ಷೆ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ, ಉಚಿತ ಔಷಧಿ ವಿತರಣೆ, ಕ್ಷಯ ರೋಗ ಪರೀಕ್ಷೆ, ಯೋಗ ಮತ್ತು ಧ್ಯಾನ, ಡಿಜಿಟಲ್ ಐಡಿ ಕಾರ್ಡ್ ವಿತರಣೆ, ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕ್ಯಾನ್ಸರ್ ಪರೀಕ್ಷೆ ಮಾಡಲಾಗುತ್ತಿದೆ ಎಂದರು.
 ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣ ಸ್ವಾಮಿ 12 ಮಳಿಗೆಗಳನ್ನು ಉದ್ಘಾಟಿಸಿದರು. ಅಸಾಂಕ್ರಾಮಿಕ ರೋಗಗಳು ಮತ್ತು ಆರೋಗ್ಯ ಕ್ಷೇಮ ಕೇಂದ್ರದ ಮಾಹಿತಿ ವಿಭಾಗ, ಪೌಷ್ಠಿಕ ಆಹಾರ ಆಹಾರ ಪ್ರಾತ್ಯಕ್ಷತೆ ಮತ್ತು ತಿಳುವಳಿಕೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ವಿಭಾಗ, ಕುಷ್ಠ ರೋಗ ಮತ್ತು ಮಾನಸಿಕ ವಿಭಾಗ, ಹದಿ ಹರೆಯದವರೆಗೆ ಜೀವನ ಕೌಶಲ್ಯ ಮಾರ್ಗದರ್ಶನ, ಆರೋಗ್ಯ ಮತ್ತು ಸಮಾಲೋಚನೆ, ಸಂತಾನೋತ್ಪತ್ತಿ ಮತ್ತು ತಾಯಿ –ಮಕ್ಕಳ ಆರೋಗ್ಯ ಮತ್ತು ಹೆಚ್.ಐ.ವಿ, ಜನನಾಂಗ ಸೋಂಕುಗಳ ಮುಂಜಾಗೃತೆ ಮತ್ತು ಆಪ್ತ ಸಮಾಲೋಚನೆ ವಿಭಾಗ, ಶ್ರವಣ ದೋಷ, ಕಣ್ಣಿನ ತಪಾಸಣೆ, ದಂತಕ್ಷಯ ತಪಾಸಣಾ ವಿಭಾಗ ಹೀಗೆ ವಿವಿಧ ವಿಭಾಗಗಳಲ್ಲಿ ಫಲಾನುಭವಿಗಳು ಭಾಗವಹಿಸಿ ಆರೋಗ್ಯ ಸೇವಾ ಸೌಲಭ್ಯಗಳನ್ನು ಪಡೆದುಕೊಂಡರು.
 ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ನಗರಸಭೆ ಅಧ್ಯಕ್ಷರಾದ ತಿಪ್ಪಮ್ಮ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಿ.ಟಿ.ಸುರೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೂಗಪ್ಪ, ಆಶಾಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply