ಹೃದಯಾಘಾತ ಮತ್ತು ಪಾರ್ಶ್ವವಾಯು ರೋಗಕ್ಕೆ ಈ ಎಣ್ಣಿ ರಾಮಬಾಣ…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ ವಿಶೇಷ ಸುದ್ದಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:     ಹೃದಯವನ್ನು ಸುರಕ್ಷಿತವಾಗಿಡಲು ಆಲಿವ್‌ ಎಣ್ಣೆ ತುಂಬಾ ಉಪಯುಕ್ತ. ಆಲಿವ್‌  ಎಣ್ಣೆಯನ್ನು ನಿಯಮಿತವಾಗಿ ಸೇವಿಸುವುದರಿಂದ ಹೃದಯಾಘಾತದ ಅಪಾಯವೂ ಕಡಿಮೆಯಾಗುತ್ತದೆ.ಆಲಿವ್‌ ಆಯಿಲ್‌ ಸೇವಿಸುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿರುತ್ತದೆ. ಕೊಲೆಸ್ಟ್ರಾಲ್ ಅನ್ನು ಸಮತೋಲನದಲ್ಲಿಡುವುದರಿಂದ ಹೃದಯಾಘಾತದ ಅಪಾಯ ಸಾಕಷ್ಟು ಕಡಿಮೆಯಾಗುತ್ತದೆ. ಆಲಿವ್ ಆಯಿಲ್‌ನಲ್ಲಿರುವ ಪಾಲಿಫಿನಾಲ್‌ಗಳು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತವೆ. ಅಧಿಕ ರಕ್ತದೊತ್ತಡದ ಸಮಸ್ಯೆ ಇರುವವರು ಆಲಿವ್‌ ಆಯಿಲ್‌ ಬಳಸುವುದು ಒಳ್ಳೆಯದು. ಇದರಲ್ಲಿರುವ ಪಾಲಿಫಿನಾಲ್‌ ಮತ್ತು ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ.ಆಲಿವ್ ಎಣ್ಣೆಯಲ್ಲಿ ಅಪರ್ಯಾಪ್ತ ಕೊಬ್ಬಿನಾಮ್ಲಗಳು ಮತ್ತು ಪಾಲಿಫಿನಾಲ್ ಸಂಯುಕ್ತಗಳಿವೆ. ಇದು ಹೃದಯದ ಅನೇಕ ಸಮಸ್ಯೆಗಳ ವಿರುದ್ಧ ಹೋರಾಡಬಲ್ಲದು. ಪ್ರತಿದಿನ ಅರ್ಧ ಟೀ ಚಮಚದಷ್ಟು ಆಲಿವ್ ಆಯಿಲ್‌ ಸೇವಿಸುವುದರಿಂದ ಹೃದಯ ರಕ್ತನಾಳಕ್ಕೆ ಸಂಬಂಧಪಟ್ಟ ಕಾಯಿಲೆಗಳು ಬರುವುದಿಲ್ಲ.ಒಮೆಗಾ-3 ಕೊಬ್ಬಿನಾಮ್ಲಗಳು ಈ ಎಣ್ಣೆಯಲ್ಲಿ ಕಂಡುಬರುತ್ತವೆ. ಇದು ಉರಿಯೂತವನ್ನು ಕಡಿಮೆ ಮಾಡಲು ಮತ್ತು ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಿಸಲು ಸಹಕಾರಿ. ಆಲಿವ್‌ ಆಯಿಲ್‌ನಲ್ಲಿ ಹೆಚ್ಚಿನ ಪ್ರಮಾಣದ ಪಾಲಿಫಿನಾಲ್‌ ಇರುವುದರಿಂದ ಉತ್ತಮ ಲಿಪಿಡ್ ಪ್ರೊಫೈಲ್‌ಗೆ ಸಹಾಯ ಮಾಡುತ್ತದೆ ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ.ಆಲಿವ್‌ ಎಣ್ಣೆಯಲ್ಲಿ ಅಡಿಗೆ ಮಾಡಿದರೆ ದೇಹದ ತೂಕವನ್ನು ಸಹ ಕಡಿಮೆ ಮಾಡಿಕೊಳ್ಳಬಹುದು. ಆಲಿವ್ ಎಣ್ಣೆ ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಇ ಕೂಡ ಇದೆ. ಆಲಿವ್‌ ಆಯಿಲ್‌ನಿಂದ ಮಸಾಜ್‌ ಮಾಡಿದ್ರೆ ಕೂದಲು ಸಹ ದಟ್ಟವಾಗಿ ಬೆಳೆಯುತ್ತದೆ. ಮತ್ತೆ ತಡ ಏಕೆ ಆಲಿವ್‌ ತೈಲ ಬಳಕೆ ಮಾಡಿ ಪರೀಕ್ಷಿಸಿ..

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply