ನೇಕಾರರಿಗೆ ಗುಡ್ ನ್ಯೂಸ್, ಕೈಮಗ್ಗ ನೇಕಾರರಿಗೆ ವಿಮಾ ಯೋಜನೆ ನೋಂದಣಿ…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ ವಿಶೇಷ ಸುದ್ದಿ

ನೇಕಾರರಿಗೆ ಗುಡ್ ನ್ಯೂಸ್, ಕೈಮಗ್ಗ ನೇಕಾರರಿಗೆ ವಿಮಾ ಯೋಜನೆ ನೋಂದಣಿ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಕೈಮಗ್ಗ ನೇಕಾರರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ವಿಮಾ ಯೋಜನೆ ಕಲ್ಪಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ.

ಇಲಾಖೆಯ ನೇಕಾರ ಸಮ್ಮಾನ್ ಯೋಜನೆಯಡಿ ನೊಂದಣಿಯಾಗಿರುವ ಜಿಲ್ಲೆಯಲ್ಲಿರುವ 18 ರಿಂದ 50 ವರ್ಷದ ವಯೋಮಾನದ ಅರ್ಹ ಕೈ ಮಗ್ಗ ನೇಕಾರರು ಈ ಯೋಜನೆಯಡಿ ನೋಂದಣಿಯಾಗಲು ಅರ್ಹರಾಗಿರುತ್ತಾರೆ. ಆಧಾರ್ ಜೋಡಣೆಯಾಗಿರುವ ಬ್ಯಾಂಕಿನಲ್ಲಿ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಬ್ಯಾಂಕ್‍ಗೆ ಸಲ್ಲಿಸಿ ಅದರ ಪ್ರತಿಯನ್ನು ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ : 08194-221426ನ್ನು ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಉಪನಿರ್ದೇಶಕರು ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply