ಬಿಪಿಎಲ್(BPL) ಕುಟುಂಬಗಳಿಗೆ ಗುಡ್ ನ್ಯೂಸ್, ಬಿಪಿಎಲ್ ಕುಟುಂಬಳಿಗೆ ಪಡಿತರ ವ್ಯವಸ್ಥೆಯಡಿ ಅಕ್ಕಿ ಜೊತೆ ಸಿರಿಧಾನ್ಯ ವಿತರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬಗಳಿಗೆ ಒಂದಲ್ಲೊಂದು ಯೋಜನೆಗಳನ್ನು ಅನುಷ್ಠಾನ ಮಾಡುತ್ತಾ ಬಂದಿದೆ. ಈಗ ಪಡಿತರ ಚೀಟಿದಾರರಿಗೆ ಪಡಿತರ ವ್ಯವಸ್ಥೆಯಡಿ ಅಕ್ಕಿ ಜೊತೆ ಸಿರಿಧಾನ್ಯ, ಜೋಳ ಮತ್ತು ರಾಗಿಯನ್ನು ಸಮಪ್ರಮಾಣದಲ್ಲಿ ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಪಡಿತರ ಚೀಟಿದಾರರಿಗೆ ಅಕ್ಕಿಯ ಜೊತೆಗೆ ರಾಗಿ,ಜೋಳ ಮತ್ತು ಸಿರಿಧಾನ್ಯಗಳನ್ನು ಸಮಪ್ರಮಾಣದಲ್ಲಿ ವಿತರಣೆ ಮಾಡಲು ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ಅಕ್ಕಿ, ಗೋಧಿ ಅಥವಾ ರಾಗಿ ನೀಡುತ್ತಿದೆ. ಪ್ರಧಾನಮಂತ್ರಿಗಳ ಗರೀಬ್ ಕಲ್ಯಾಣ್ ಯೋಜನೆಯಡಿ 5 ಕೆಜಿ ಅಕ್ಕಿಯನ್ನೂ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ಕಿಯ ಜೊತೆಗೆ ರಾಗಿ, ಜೋಳ ಮತ್ತು ಸಿರಿಧಾನ್ಯಗಳನ್ನು ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಮೈಸೂರು ಭಾಗದಲ್ಲಿ ಅಕ್ಕಿಯ ಜೊತೆಗೆ ರಾಗಿ, ಸಜ್ಜೆ, ನವಣೆ ಸೇರಿದಂತೆ ಸಿರಿಧಾನ್ಯಗಳನ್ನು ನೀಡುವುದು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಅಕ್ಕಿ, ಗೋಧಿ ಜೊತೆಗೆ ಜೋಳ ಒದಗಿಸಲು ತಜ್ಞರು ವರದಿ ನೀಡಿದ್ದಾರೆ ಎನ್ನಲಾಗಿದ್ದು, ಈ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.