ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೇ 9 ರವರೆಗೆ ಭಾರಿ ಮಳೆ…

ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಬೆಂಗಳೂರು ವಿಜ್ಞಾನ ವಿಶೇಷ ಸುದ್ದಿ

ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೇ 9 ರವರೆಗೆ ಭಾರಿ ಮಳೆ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮೇ-9 ರವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡಿನ ಚಿತ್ರದುರ್ಗ, ಮೈಸೂರು, ಬಳ್ಳಾರಿ, ಚಾಮರಾಜನಗರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳು, ಉತ್ತರ ಒಳನಾಡಿನ ಕೊಪ್ಪಳ, ಗದಗ, ಹಾವೇರಿ, ಧಾರವಾಡ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನೊಂದಿಗೆ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply