ಎಸ್ಎಸ್ಎಲ್ ಸಿ, ಐಟಿಐ, ಡಿಪ್ಲೊಮಾ ಪಾಸಾದವರಿಗೆ ಗುಡ್ ನ್ಯೂಸ್, 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ಸರ್ಕಾರದ ಅಂಚೆ ಇಲಾಖೆ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ನೀಡಿದೆ. ಭಾರತೀಯ ಅಂಚೆ ಇಲಾಖೆ ಬೃಹತ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ದೇಶದಾದ್ಯಂತ 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು ಈ ಪೈಕಿ ಕರ್ನಾಟಕದಲ್ಲಿ ಖಾಲಿ ಇರುವ ಗ್ರಾಮೀಣ ಡಾಕ್ ಸೇವಕ್ 2410 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆ ಹೆಸರು: ಗ್ರಾಮೀಣ ಡಾಕ್ ಸೇವಕ್
ಒಟ್ಟು ಹುದ್ದೆಗಳ ಸಂಖ್ಯೆ: 38,926
ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ : 2410
ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಐಟಿಐ, ಡಿಪ್ಲೊಮಾ ಪಡೆದವರೂ ಅರ್ಜಿ ಸಲ್ಲಿಸಬಹುದು. ಕನ್ನಡವನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು.
ಬೇಸಿಕ್ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯಸ್ಸು: ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ: ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಇದೆ.
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು ರೂ.100 ಪಾವತಿಸಬೇಕು. ಎಸ್ಸಿ / ಎಸ್ಟಿ / ಪಿಡಬ್ಲ್ಯೂಡಿ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯ್ತಿ ಇದೆ.
ನೇಮಕ, ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಬಳಿಕ ಮೆರಿಟ್ ಪಟ್ಟಿ ತಯಾರಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05-06-2022, ವೇತನ: ಮಾಸಿಕ ವೇತನದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್ ನೋಡಬಹುದು.
ವೆಬ್ಸೈಟ್: https://indiapostgdsonline.gov.in
ಅಧಿಸೂಚನೆ ಲಿಂಕ್: https://indiapostgdsonline.cept.gov.in/Notifications/Model_Notification.pdf