ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್, 75 ಯುನಿಟ್ ಉಚಿತ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ…

ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಬೆಂಗಳೂರು ಮೇಕ್ ಇನ್ ಇಂಡಿಯಾ ವಿಶೇಷ ಸುದ್ದಿ

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್, 75 ಯುನಿಟ್ ಉಚಿತ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪ್ರಮಾಣವನ್ನು 40 ಯುನಿಟ್ ನಿಂದ 75 ಯುನಿಟ್ ಗೆ ಹೆಚ್ಚಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದ್ದು ಇಂಧನ ಇಲಾಖೆಗೆ ವಾರ್ಷಿಕ 979 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ. ಈ ಕುರಿತಾದ ಕಡತ ಹಣಕಾಸು ಇಲಾಖೆಗೆ ರವಾನೆಯಾಗಿದ್ದು, ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಪ್ರಕಟವಾಗಲಿದೆ ಎಂದು ಇಂಧನ ವಿ.ಸಚಿವ ಸುನೀಲ್ ಕುಮಾರ್ ಹೇಳಿದರು.

ರಾಜ್ಯದಲ್ಲಿ 75 ಯುನಿಟ್ ಒಳಗೆ ವಿದ್ಯುತ್ ಬಳಸುವ ಗೃಹ ಬಳಕೆದಾರರ ಸಂಖ್ಯೆ 1,46,65,910 ರಷ್ಟು ಇದೆ. ಈ ಪೈಕಿ ಭಾಗ್ಯ ಜ್ಯೋತಿ ಹಾಗೂ ಕುಟಿರ ಜ್ಯೋತಿ ವ್ಯಾಪ್ತಿಗೆ ಬರುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಳಕೆದಾರರ ಸಂಖ್ಯೆ 39,26,065 ರಷ್ಟು ಇದೆ. ಈ ಗ್ರಾಹಕರು ವಾರ್ಷಿಕ 1,356,92 ಮಿಲಿಯನ್ ಯುನಿಟ್ ಬಳಕೆ ಮಾಡುತ್ತಾರೆ. ಒಟ್ಟಾರೆಯಾಗಿ ಈ ಯೋಜನೆಯ ಫಲಾನುಭವಿಗಳನ್ನೂ ಒಳಗೊಂಡಂತೆ ಪರಿಶಿಷ್ಟ ಜಾತಿಯ ಗ್ರಾಹಕರಿಗೆ 694.15 ಕೋಟಿ ರೂ, ಪರಿಶಿಷ್ಟ ಪಂಗಡದ ಗ್ರಾಹಕರಿಗೆ 285.42 ಕೋಟಿ ರೂ. ಸೇರಿದಂತೆ 979 ಕೋಟಿ ರೂ.ನ್ನು ಸಬ್ಸಿಡಿ ರೂಪದಲ್ಲಿ ಇಂಧನ ಇಲಾಖೆ ನೀಡಲಿದೆ.

ಸರ್ಕಾರ ನೀಡಲು ಉದ್ದೇಶಿಸಿ ಉಚಿತ ವಿದ್ಯುತ್ ಭಾಗ್ಯಜ್ಯೋತಿ ಹಾಗೂ ಕುಟಿರ ಜ್ಯೋತಿ ಯೋಜನೆ ವ್ಯಾಪ್ತಿಯಲ್ಲಿ ಬರುವವರೂ ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫಲಾನುಭವಿಗಳ ಮನೆಯಲ್ಲಿ ಇನ್ನು ಮುಂದೆ ವಿದ್ಯುತ್ ನಿರಂತರವಾಗಲಿದೆ ಎಂದು ಸಚಿವರು ಹೇಳಿದರು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply