ಗ್ರಾಮ ಪಂಚಾಯಿತಿ ಹಣ ದುರುಪಯೋಗ, ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಕಮಲಾ ಬಂಧನ…

ಕೋಲಾರ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ

ಗ್ರಾಮ ಪಂಚಾಯಿತಿ ಹಣ ದುರುಪಯೋಗ, ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಕಮಲಾ ಬಂಧನ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕಮಲಾ ಅವರನ್ನು ಕೋಲಾರ ಗ್ರಾಮಾಂತರ ರಾಣೆ ಪೊಲೀಸರು ಸರ್ಕಾರಕ್ಕೆ ಸೇರಿದ್ದ ಲಕ್ಷಾಂತರ ರೂಪಾಯಿ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಬಂಧಿಸಿದ್ದಾರೆ.

ಕೋಲಾರ ತಾಲೂಕುನ ಮಾರ್ಜೇನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಕಮಲಾ ಅವರು 14 ಮತ್ತು 15ನೇ ಹಣಕಾಸು ಯೋಜನೆಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಕ್ಕೆ 16.5 ಲಕ್ಷ ರೂ. ವಂಚನೆ ಮಾಡಿರುವ ಆರೋಪ ಎದುರಿಸುತ್ತಿದ್ದು ಆಡಳಿತ ಮಂಡಳಿಯ ದೂರು ಆಧರಿಸಿ ಪೊಲೀಸರು ಬಂಧಿಸಿದ್ದಾರೆ.

ಮಾರ್ಜೇನಹಳ್ಳಿ ಗ್ರಾಮ ಪಂಚಾಯಿತಿ ಸಮಿತಿಯವರು ಕಳೆದ ಜನವರಿ 20ರಂದು ಪೊಲೀಸರಿಗೆ ಕಮಲಾ ವಿರುದ್ಧ ದೂರು ನೀಡಿದ್ದರು. ಆದರೆ ಕಮಲಾ ಅವರು ಡೇಟಾ ಎಂಟ್ರಿ ಸಿಬ್ಬಂದಿ ಮೇಲೆ ಆರೋಪ ಹೊರಿಸಿದ್ದರು ಎನ್ನಲಾಗಿದೆ.

What’s your Reaction?
+1
0
+1
2
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ