ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಆರೋಗ್ಯ ಕಾಪಾಡಿಕೊಳ್ಳಬೇಕು-ಭಾರತಿ ಆರ್ ಬಣಕಾರ್‌…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ

ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಆರೋಗ್ಯ ಕಾಪಾಡಿಕೊಳ್ಳಬೇಕು-ಭಾರತಿ ಆರ್ ಬಣಕಾರ್‌…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅಪೌಷ್ಟಿಕತೆ ಹೊಂದಿರುವ ಮಕ್ಕಳ ಕಡೆ ಹೆಚ್ಚು ಕಾಳಜಿ ವಹಿಸಬೇಕು. ಗರ್ಭಿಣಿ ಮತ್ತು ಬಾಣಂತಿಯರ ಮರಣ ಪ್ರಮಾಣವನ್ನು ಕಡಿಮೆ ಮಾಡುವುದು ಪೋಷನ್ ಅಭಿಯಾನದ ಮೂಲ ಉದ್ದೇಶವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್ ಬಣಕಾರ್‌ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪೋಷಣ್ ಅಭಿಯಾನ್ ವತಿಯಿಂದ ಸೋಮವಾರ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಗಾರದ ಉದ್ಘಾಟಿಸಿ ಮಾತನಾಡಿದರು.
ಅಪೌಷ್ಟಿಕತೆ ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಉತ್ತಮ ಆರೋಗ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತರ ಮುಖಾಂತರ ಪೋಷಣ್ ಅಭಿಯಾನ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಜಿಲ್ಲಾ ನಿರೂಪಣಾಧಿಕಾರಿ ಕೆಂಪಹನುಮಪ್ಪ, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಪವಿತ್ರ,  ಸವಿತಾ.ಸಿ. ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿಗಳು, ಹಿರಿಯ ಮಹಿಳಾ ಮೇಲ್ವಿಚಾರಕರು, ಪೋಷಣ ಅಭಿಯಾನದ ಜಿಲ್ಲಾ ಸಂಯೋಜಕರಾದ ರಂಗಸ್ವಾಮಿ ಹಾಗೂ ಪ್ರತಾಪ್ ಉಪಸ್ಥಿತರಿದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0