ಸರ್ಕಾರಿ ನೌಕರರಿಗೆ ಮತ್ತು ಅವಲಂಬಿತ ಕುಟುಂಬ ಸದಸ್ಯರ ಶ್ವಾಸಕೋಶ ಕಸಿ ಶಸ್ತ್ರ ಚಿಕಿತ್ಸೆಯ ಮರು ಪಾವತಿಗಳ ದರ ನಿಗದಿ-ಅಧ್ಯಕ್ಷ ಮಂಜುನಾಥ್…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ

ಸರ್ಕಾರಿ ನೌಕರರಿಗೆ ಮತ್ತು ಅವಲಂಬಿತ ಕುಟುಂಬ ಸದಸ್ಯರ ಶ್ವಾಸಕೋಶ ಕಸಿ ಶಸ್ತ್ರ ಚಿಕಿತ್ಸೆಯ ಮರು ಪಾವತಿಗಳ ದರ ನಿಗದಿ-ಅಧ್ಯಕ್ಷ ಮಂಜುನಾಥ್…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಶ್ವಾಸಕೋಶ ಕಸಿ ಶಸ್ತ್ರ ಚಿಕಿತ್ಸೆಗೆ ವೈದ್ಯಕೀಯ ಮರುಪಾವತಿಗಳ ದರವನ್ನು ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಮಂಜುನಾಥ್ ತಿಳಿಸಿದ್ದಾರೆ.

ನೌಕರರ ಸಂಘದ ಬಹುದಿನದ ಬೇಡಿಕೆಯಂತೆ ಸ್ವಾಶಕೋಶ ಕಸಿ ಶಸ್ತ್ರ ಚಿಕಿತ್ಸೆಗೆ ಒಳಪಡುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಚಿಕಿತ್ಸೆಗೆ ಅನುಕೂಲವಾಗುವಂತೆ ಹಾಗೂ ನೌಕರರ ಹಿತದೃಷ್ಟಿಯಿಂದ, ನೌಕರರಲ್ಲಿ ಒಂದಷ್ಟು ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರವು ಇಂದು ವೈದ್ಯಕೀಯ ಮರುಪಾವತಿಗಳ ದರವನ್ನು ನಿಗದಿಪಡಿಸಿ ಆದೇಶಹೊರಡಿಸಿದೆ ಎಂದು ಅವರು ತಿಳಿಸಿದ್ದಾರೆ.

ಈ ಆದೇಶ ಹೊರಡಿಸುವ ಮೂಲಕ ಇಡೀ ನೌಕರರ ಸಮುದಾಯವು ನೆಮ್ಮದಿಯಿಂದ ಸರ್ಕಾರಿ ಸೇವೆಯನ್ನು ಮಾಡಲು ಅನುವು ಮಾಡಿಕೊಟ್ಟ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ನೌಕರರ ಬಗ್ಗೆ ಅಪಾರ ಕಾಳಜಿ ಗೌರವ ಹೊಂದಿ ಈ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಸತತ ಪ್ರಯತ್ನದ ನಂತರ ಯಶಸ್ವಿಯಾಗಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ ಎಸ್ ಷಡಕ್ಷರಿ ಅವರಿಗೆ ಹಾಗೂ ಕೇಂದ್ರ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಈ ಆದೇಶ ಹೊರಡಿಸಲು ಸಹಕರಿಸಿದ ಎಲ್ಲಾ ಉನ್ನತ ಅಧಿಕಾರಿ ಮತ್ತು ನೌಕರರಿಗೆ ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರ ಸಂಘದ ವತಿಯಿಂದ ಅಭಿನಂದನೆಗಳನ್ನು ಅವರು ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0