ಕೊರೊನಾ ಸೋಂಕು ನಿಯಂತ್ರಣಕ್ಕಾಗಿ 18-59 ವರ್ಷದವರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ….

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ 18-59 ವರ್ಷದವರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ಚಾಲನೆ….

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ 18-59 ವರ್ಷದವರಿಗೆ ಜೂಲೈ -15 ರಿಂದ‌ 75 ದಿನಗಳವರೆಗೆ ಉಚಿತ ಬೂಸ್ಟರ್ ಡೋಸ್ ಕೋವಿಡ್ ಲಸಿಕಾ ಅಭಿಯಾನದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ‌ ನಗರದ ಎಸ್.ಜೆ.ಎಮ್.‌ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಬೂಸ್ಟರ್ (ಮುನ್ನೆಚ್ಚರಿಕೆ) ಡೋಸ್ ಕೋವಿಡ್ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಈಗಾಗಲೇ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಈಗ 18-59 ವರ್ಷದಡಿ ಇರುವ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದ್ದು ಎರಡನೇ ಡೋಸ್ ಪಡೆದು ಆರು ತಿಂಗಳು ಪೂರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳು ಬೂಸ್ಟರ್ ಡೋಸ್ ಲಸಿಕೆ‌ ಪಡೆದು ತಮ್ಮ ಕುಟುಂಬ ಸದಸ್ಯರು ಹಾಗೂ ಸಮುದಾಯದ ಎಲ್ಲಾ ಸಾರ್ವಜನಿಕರು ಹತ್ತಿರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸೀಮಿತವಾದ 75 ದಿನಗಳಲ್ಲಿ ಉಚಿತ ಲಸಿಕೆ ಪಡೆಯಲು ಮಾಹಿತಿ ನೀಡುವ ಮೂಲಕ ಆರೋಗ್ಯ ಇಲಾಖೆಯ ಜೊತೆ ಎಲ್ಲರೂ ಕೈಜೊಡಿಸಭೆಕೇಂದು ಆರೋಗ್ಯ ನಿರೀಕ್ಷಣಾಧಿಕಾರಿ ಎ.ಗಂಗಾಧರ ತಿಳಿಸಿದರು..

ಕಾಲೇಜಿನ ಐಕ್ಯೂಎಸಿ ಸಂಯೋಜಕ ಡಾ ಚೆಲವರಾಜು ಮತನಾಡಿ ಆರೋಗ್ಯ ಇಲಾಖೆ ತಂಡ ನಮ್ಮ ಕಾಲೇಜಿಗೆ ಬಂದು ಮುಂಜಾಗ್ರತೆಯಾಗಿ ಕೋವಿಡ್ ಬೂಸ್ಟರ್‌ ಡೋಸ್ ಲಸಿಕೆ‌ ನೀಡುತ್ತಿರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಲಸಿಕೆ ಪಡೆದು ಮುಂದಿನ ದಿನಗಳಲ್ಲಿ ಬರಬಹುದಾದ ಸಂಭಾವ್ಯ ಕೋವಿಡ್ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಎಲ್‌. ಈಶ್ವರಪ್ಪ ಮಾತನಾಡಿ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳ ಹಂತದಿಂದ ಕೊನೆಯ ಹಂತದ ಎಲ್ಲಾ ಸಿಬ್ಬಂದಿಗಳು ಕಳೆದ ಎರಡು ವರ್ಷಗಳಿಂದ ಕೋವಿಡ್
ಮೂರು ಅಲೆಗಳಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡಲು ತಮ್ಮ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದು ಅವರಿಗೆ ನಾವೆಲ್ಲ ಧನ್ಯವಾದಗಳನ್ನು ತಿಳಿಸಭೇಕು ಹಾಗೂ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ನೀಡುವ ಸೂಚನೆಗಳನ್ನು ಪಾಲಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್.ಜೆ.ಎಮ್ ಕಾನೂನು ಕಾಲೇಜಿನ ಪ್ರಾಂಶುಪಾಲೆ ಸುಮನ ಅಂಗಡಿ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಗೌರಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ.ಪ್ರಸನ್ನಕುಮಾರ್, ಸಿರೀಶ್, ಮಂಜುನಾಥ್, ಮಹಾಂತೇಶ್, ಮೀನಾಕ್ಷಿ ಉಪಸ್ಥಿತರಿದ್ದರು.

ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಜಿ.ಎಸ್. ನಾಗರಾಜ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಉಪನ್ಯಾಸಕ ಗಿರೀಶ್ ವಂದಿಸಿದರು.

What’s your Reaction?
+1
0
+1
0
+1
0
+1
0
+1
0
+1
0
+1
0