ಮೊರಾರ್ಜಿ ಶಾಲೆಯ ಮಕ್ಕಳು ಪದೇ ಪದೇ ಅಸ್ವಸ್ಥ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಖಡಕ್ ಎಚ್ಚರಿಕೆ…

ಅರೋಗ್ಯ ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಜಿಲ್ಲಾ ಸುದ್ದಿ ಮೇಕ್ ಇನ್ ಇಂಡಿಯಾ ಹೊಳಲ್ಕೆರೆ

ಮೊರಾರ್ಜಿ ಶಾಲೆಯ ಮಕ್ಕಳು ಪದೇ ಪದೇ ಅಸ್ವಸ್ಥ, ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ…

ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:

ಹೊಳಲ್ಕೆರೆ ಕ್ಷೇತ್ರದಲ್ಲಿನ ಮೊರಾರ್ಜಿ ವಸತಿ ಶಾಲೆಯ ಮಕ್ಕಳು ಪದೇ ಪದೇ ಕಲುಷಿತ ನೀರು ಕುಡಿದು ಅಸ್ವಸ್ಥರಾಗುವುದು ಮುಂದುವರೆಯಬಾರದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹೊಳಲ್ಕೆರೆ ತಾಲೂಕಿನ ಹನುಮಂತದೇವರ ಕಣಿವೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 28 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಅವರು ಮಕ್ಕಳ ಆರೋಗ್ಯ ವಿಚಾರಿಸಿ ವಸತಿ ಶಾಲೆಯ ಪ್ರಾಂಶುಪಾಲರಿಗೆ ಎಚ್ಚರಿಕೆ ನೀಡಿದರು. 

ವಿದ್ಯಾರ್ಥಿಗಳು ನಲ್ಲಿಯಲ್ಲಿ ಬರುವ ನೀರು ಕುಡಿದಿದ್ದಾರೆ. ಆಗ ಕೆಲವು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದು, ಅಸ್ವಸ್ಥಗೊಂಡವರನ್ನು ಹೊಳಲ್ಕೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನಲ್ಲಿರುವ ವಸತಿ ಶಾಲೆಗಳ ಇಡಿ(ಕಾರ್ಯ ನಿರ್ವಾಣಾಧಿಕಾರಿ) ಅವರಿಗೆ ಮೊಬೈಲ್ ಮೂಲಕ ಕರೆ ಮಾಡಿದ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ, ವಸತಿ ಶಾಲೆಗೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು, ಪದೇ ಪದೇ ಮಕ್ಕಳು ಕಲುಷಿತ ನೀರು ಕುಡಿದು ಅಸ್ವಸ್ಥರಾಗುತ್ತಿದ್ದು ಜೀವಕ್ಕೆ ಅಪಾಯವಾದರೆ ಯಾರು ಹೊಣೆ ಎಂದು ಪ್ರಶ್ನಿಸಿದ ಅವರು ಕೂಡಲೇ ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಿದರು.

ಪ್ರಾಂಶುಪಾಲ ಶಿವಮೂರ್ತಿ ನಾಯ್ಕ ಮಾತನಾಡಿ ಮೊರಾರ್ಜಿ ವಸತಿ ಶಾಲೆಯಲ್ಲಿ 130 ವಿದ್ಯಾರ್ಥಿಗಳು ಶಿಕ್ಷಣ ಕಲಿಯುತ್ತಿದ್ದಾರೆ, ಈ ವಸತಿ ಶಾಲೆಗೆ ಸ್ವಂತ ಕೊಳವೆಬಾವಿ ಇಲ್ಲ. ದೂರದಲ್ಲಿರುವ ಕೊಳವೆಬಾವಿಯಿಂದ ಪೈಪ್‌ಲೈನ್‌ ಮೂಲಕ ನೀರು ಹರಿಸಲಾಗುತ್ತಿದೆ. ಮಳೆಗಾಲದಲ್ಲಿ ಕೆಸರು ನೀರು ಪೈಪ್ ಒಳಗೆ ಸೇರಿಕೊಳ್ಳುತ್ತದೆ. ಶಾಲೆಯಲ್ಲಿ ಚಿಕ್ಕ ಶುದ್ಧ ನೀರಿನ ಘಟಕಗಳಿದ್ದು, ಮಕ್ಕಳು ಹೆಚ್ಚು ಇರುವುದರಿಂದ ಅವು ಸಾಕಾಗುವುದಿಲ್ಲ. ಆದ್ದರಿಂದ ಶಾಲೆಗ ಪ್ರತ್ಯೇಕ ಕೊಳವೆಬಾವಿ ಹಾಗೂ ಹೆಚ್ಚಿನ ಸಾಮರ್ಥ್ಯದ ಶುದ್ಧ ನೀರಿನ ಘಟಕ ಅಗತ್ಯವಿದ್ದು ಕೂಡಲೇ ವ್ಯವಸ್ಥೆ ಮಾಡಿಸುವಂತೆ ಜಿಲ್ಲಾಧಿಕಾರಿ ಕವಿತಾ. ಎಸ್‌ ಮನ್ನಿಕೇರಿ ಅವರಲ್ಲಿ ಮನವಿ ಮಾಡಿದರು.

ಊಟ ಸೇವನೆ ನಂತರ ನೀರು ಕುಡಿದ ವಿದ್ಯಾರ್ಥಿಗಳಲ್ಲಿ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ಇದಕ್ಕೆ ಕಲುಷಿತ ನೀರು ಕಾರಣ ಇರಬಹುದು. ಎಲ್ಲಾ ವಿದ್ಯಾರ್ಥಿಗಳಿಗೂ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಮಕ್ಕಳ ತಜ್ಞ ಡಾ.ಮಂಜುನಾಥ್ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಹೊಳಲ್ಕೆರೆ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

What’s your Reaction?
+1
0
+1
0
+1
0
+1
0
+1
0
+1
0
+1
0