ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್, ಪ್ರತಿ ಲೀಟರ್ ಹಾಲಿನ ದರ 1 ರೂ.ಗೆ ಏರಿಕೆ…

ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ದಾವಣಗೆರೆ ಶಿವಮೊಗ್ಗ

ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್, ಪ್ರತಿ ಲೀಟರ್ ಹಾಲಿನ ದರ 1 ರೂ.ಗೆ ಏರಿಕೆ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಶಿವಮೊಗ್ಗ ಹಾಲು ಒಕ್ಕೂಟ ವ್ಯಾಪ್ತಿಯ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.1 ಹೆಚ್ಚಿಸಲಾಗುವುದು ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಶ್ರೀಪಾದರಾವ್ ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಮಾಚೇನಹಳ್ಳಿ ಹಾಲಿನ ಡೇರಿಯಲ್ಲಿ ಇಂದು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಅವಲೋಕಿಸಿ ಹಾಲು ಖರೀದಿ ದರ ಪರಿಷ್ಕರಿಸುತ್ತಾ ಬಂದಿದೆ. 60 ಸಾವಿರ ಹಸುಗಳ ವಿಮೆ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಪ್ರಗತಿಯಾಗಿದ್ದು, ದಿನಾಂಕ : 11-08-2022 ರಿಂದ ಹಾಲಿನ ದರವನ್ನು ಪ್ರತಿ ಲೀಟರ್ ಗೆ ರೂ.1 ಹೆಚ್ಚಿಸಲಾಗುವುದು. ದಿನಾಂಕ: 02-08-2022 ರಂದು ನಡೆದ ಒಕ್ಕೂಟದ 421 ನೇ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಒಕ್ಕೂಟದಿಂದ ಸಂಘಗಳಿಗೆ ಹಾಲಿ ನೀಡುತ್ತಿರುವ ದರ ಪ್ರತಿ ಲೀಟರ್ ಹಾಲಿಗೆ (ಶೇ. 4.0 ಎಸ್‍ಎನ್‍ಎಫ್ 8.50%) 29.02 ಆಗಿದ್ದು ಆಗಸ್ಟ್ 11 ರಿಂದ ನೀಡುವ ದರ ರೂ.30.06/- ಆಗಲಿದೆ. ಸಂಘದಿಂದ ಉತ್ಪಾದರಿಗೆ ಹಾಲಿ ನೀಡುತ್ತಿರುವ ದರ (ಶೇ. 4.0 ಎಸ್‍ಎನ್‍ಎಫ್ 8.50%) ಪ್ರತಿ ಲೀಟರ್ ಹಾಲಿಗೆ ರೂ. 27.16 ಆಗಿದ್ದು ಆಗಸ್ಟ್ 11 ರಿಂದ ನೀಡುವ ದರ ರೂ.28.20 ಆಗಿರುತ್ತದೆ ಎಂದು ಅವರು ಮಾಹಿತಿ ನೀಡಿದರು.

ಶಿವಮೊಗ್ಗ ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ ಪ್ರಸ್ತುತ 1347 ಸಹಕಾರ ಸಂಘಗಳು ಇದ್ದು ಪ್ರತಿ ದಿನ 7 ಲಕ್ಷ ಲೀಟಲ್ ಹಾಲು ಉತ್ಪಾದನೆಯಾಗುತ್ತಿದೆ. ಶಿವಮೊಗ್ಗ ಹಾಲಿನ ಡೇರಿ ಆವರಣದಲ್ಲಿ ಆಧುನಿಕ ಪ್ಯಾಕಿಂಗ್ ಯಂತ್ರೋಪಕರಣ ಅಳವಡಿಸುವ ಹಾಗೂ ಕಚ್ಚಾ ಹಾಲಿನ ಪ್ರಯೋಗಾಲಯ ಆಧುನೀಕರಣಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಡೇರಿಯಲ್ಲಿ ದಿನವಹಿ 1.50 ಲಕ್ಷ ಲೀ. ಹಾಲು ಮತ್ತು 0.50 ಲಕ್ಷ ಕೆ.ಜಿ ಮೊಸರು ಉತ್ಪಾದನೆಗೆ ಅನುಕೂಲವಾಗುವಂತೆ ರೂ.15 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಯೋಜನೆ ರೂಪಿಸಲಾಗಿದೆ. ತಡಗಣಿ ಶೀತಲೀಕರಣ ಕೇಂದ್ರದಲ್ಲಿ ಹಾಲಿನ ತಣಿಸುವಿಕೆ ಸಾಮರ್ಥ್ಯ ಹೆಚ್ಚಿಸಲು ನೂತನ 20.0 ಕೆ.ಎ.ಪಿ.ಹೆಚ್ ಸಾಮರ್ಥ್ಯದ ಚಿಲ್ಲರ್ ಹಾಗೂ ಸ್ಟೋರೇಜ್ ಟ್ಯಾಂಕ್‍ಗಳನ್ನು ಅಳವಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಹೊನ್ನಾಳಿ ಶೀತಲೀಕರಣ ಕೇಂದ್ರದಲ್ಲಿ ನೂತನ 20.0 ಕೆ.ಎಲ್.ಪಿ.ಹೆಚ್ ಸಾಮರ್ಥ್ಯದ ಚಿಲ್ಲರ್ ಅಳವಡಿಸುವ ಪ್ರಕ್ರಿಯೆ ಕೂಡ ಜಾರಿಯಲ್ಲಿದೆ ಹಾಗೂ ಹೊಸದುರ್ಗ ಪಟ್ಟಣದಲ್ಲಿ ನೂತನ ನಿವೇಶನ ಖರೀದಿಸಿ 60 ಕೆ.ಎಲ್ ಸಾಮರ್ಥ್ಯದ ಚಿಲ್ಲರ್ ಅಳವಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ನಿರ್ದೇಶಕರು, ಪಶಪಾಲನಾ ಇಲಾಖೆಯ ಉಪನಿರ್ದೇಶಕ ಎಸ್.ವಿ.ಯಲಿ, ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಬಸವರಾಜ್ ಇದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0