ಆಗಸ್ಟ್-9 ರಿಂದ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ 75 ಕಿಲೋ ಮೀಟರ್ ಪಾದಯಾತ್ರೆ…

ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ರಾಜಕೀಯ

ಆಗಸ್ಟ್-9 ರಿಂದ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ 75 ಕಿಲೋ ಮೀಟರ್ ಪಾದಯಾತ್ರೆ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಭಾರತ ಸ್ವಾತಂತ್ರ್ಯದ ಅಮೃತ(75ನೇ) ಮಹೋತ್ಸವ ಹಿನ್ನೆಲೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಗಸ್ಟ್-9 ಮತ್ತು 10 ರಂದು 75 ಕಿಲೋ ಮೀಟರ್ ಪಾದಯಾತ್ರೆ ಕೈಗೊಳ್ಳಲಾಗಿದೆ ಎಂದು ಚಿತ್ರದುರ್ಗ ವಿಧಾನಸಭಾ ಪರಾಜಿತ ಅಭ್ಯರ್ಥಿ ಎಚ್.ಎ.ಷಣ್ಮುಖಪ್ಪ ಹೇಳಿದರು.
ನಗರದ ಹೊಳಲ್ಕೆರೆ ರಸ್ತೆಯ ಅವರ ನಿವಾಸದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ತಾಲೂಕಿನ ಕಾಸವರಹಟ್ಟಿಯಿಂದ ಆಗಸ್ಟ್-9 ರಂದು ಬೆಳಿಗ್ಗೆ 8.45ಕ್ಕೆ ಪಾದಯಾತ್ರೆ ಆರಂಭಿಸಲಾಗುತ್ತದೆ. ಅಲ್ಲಿಂದ ಹಳೆ ದ್ಯಾಮವ್ವನಹಳ್ಳಿ, ಹೊಸ ದ್ಯಾಮವ್ವನಹಳ್ಳಿ, ಹೊಸ ಮಾಳಿಗೆ, ಬಚ್ಚಬೋರನಹಟ್ಟಿ, ಬೊಮ್ಮೆನಹಳ್ಳಿ, ಹೊ.ಚಿ.ಬೋರಯ್ಯ ಬಡಾವಣೆ, ಗೋನೂರು, ಮುತ್ತಯ್ಯನಹಟ್ಟಿ, ಮಲ್ಲಾಪುರ ಗೊಲ್ಲರಹಟ್ಟಿ, ಮಲ್ಲಾಪುರ, ಪಿಳ್ಳೇಕೆರೆನಹಳ್ಳಿ, ವಿದ್ಯಾನಗರ, ಮೆದೇಹಳ್ಳಿ, ಮಲ್ಲನಕಟ್ಟೆ ಮಠದ ಕುರುಬರಹಟ್ಟಿಗೆ ಪಾದಯಾತ್ರೆ ಬಂದು ತಲುಪಲಿದೆ. ಆ.10 ರಂದು ನಗರ ವ್ಯಾಪ್ತಿಯ ಕಾಂಗ್ರೆಸ್ ಕಚೇರಿಯಿಂದ ಪಾದಯಾತ್ರೆ ಆರಂಭವಾಗಲಿದೆ ಎಂದು ಅವರು ತಿಳಿಸಿದರು.

ಎರಡು ದಿನ ನಡೆಯಲಿರುವ ಪದಯಾತ್ರೆಯಲ್ಲಿ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಸ್ವಾತಂತ್ರ್ಯದ ಮಹತ್ವ, ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಪಾದಯಾತ್ರೆಯಲ್ಲಿ ಕಾಂಗ್ರೆಸ್ ನ ನೂರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ, ಪಾದಯಾತ್ರೆಯಲ್ಲಿ ಚಿತ್ರದುರ್ಗ ಮತಕ್ಷೇತ್ರದ ವ್ಯಾಪ್ತಿಯ ನೂರಾರು ಕಾರ್ಯಕರ್ತರು, ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಮತ್ತು ಹಲವು ಮುಖಂಡರು ಭಾಗಿಯಾಗಲಿದ್ದಾರೆ ಎಂದು ಷಣ್ಮುಖಪ್ಪ ತಿಳಿಸಿದರು.

75 ನೇ ಸ್ವಾತಂತ್ರ್ಯೋತ್ಸವ ಹಿನ್ನಲೆಯಲ್ಲಿ ಅಮೃತ ಮಹೋತ್ಸವ ಆಚರಣೆ ಮಾಡಲಾಗುತ್ತಿದೆ. ಯುವಕರಿಗೆ ಭಾರತ ಸ್ವಾತಂತ್ರ್ಯ ,ಹೋರಾಟಗಾರ ಜೀವನ ಚರಿತ್ರೆ ಬಗ್ಗೆ ತಿಳಿಸಿವ ಕೆಲಸ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅಧೀನಾಯಕಿ ಸೋನಿಯಾ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆದೇಶದ ಮೇರೆಗೆ ಕ್ಷೇತ್ರ ವ್ಯಾಪ್ತಿಯಲ್ಲಿ 75 ಕಿಲೋ ಮೀಟರ್ ವರಿಗೆ ಪಾದಯಾತ್ರೆ ಮಾಡಲಾಗುತ್ತಿದೆ. ನಮ್ಮ ಮತ ಕ್ಷೇತ್ರದಲ್ಲಿ ಪಾದಯಾತ್ರೆ ಹಮ್ಮಿಕೊಂಡಿದೇವೆ ಎಂದು ಅವರು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನರಸಿಂಹರಾಜ್, ಡಿ.ಎನ್.ಮೈಲಾರಪ್ಪ, ಸಂಪತ್ ಕುಮಾರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

What’s your Reaction?
+1
0
+1
0
+1
0
+1
1
+1
0
+1
0
+1
0