ರೈತರು ಇ-ಕೆವೈಸಿ ನೋಂದಣಿ ಮಾಡಿಸಿ ವರ್ಷಕ್ಕೆ 6 ಸಾವಿರ ರೂ.ಪಡೆಯಿರಿ…

ಚಂದ್ರವಳ್ಳಿ ನ್ಯೂಸ್ ಡೆಸ್ಕ್ ಚಿತ್ರದುರ್ಗ ಜಿಲ್ಲಾ ಸುದ್ದಿ ನವದೆಹಲಿ ಮೇಕ್ ಇನ್ ಇಂಡಿಯಾ ಸಾಧನೆ

ರೈತರು ಇ-ಕೆವೈಸಿ ನೋಂದಣಿ ಮಾಡಿಸಿ ವರ್ಷಕ್ಕೆ 6 ಸಾವಿರ ರೂ.ಪಡೆಯಿರಿ…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ರೈತರು ಇ-ಕೆವೈಸಿ ಅನ್ನು ನೋಂದಣಿ ಮಾಡುವುದು ಕಡ್ಡಾಯವಾಗಿ. ರೈತರು ಇ-ಕೆವೈಸಿಯನ್ನು ಎರಡು ವಿಧಾನಗಳಲ್ಲಿ ಕೈಗೊಳ್ಳಬಹುದಾಗಿದೆ. ಆಗಸ್ಟ್, 15 ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ.

ರೈತರು http://pmkisan.gov.in ಪೋರ್ಟಲ್‍ನ ಪಾರ್ಮರ್ಸ್ ಕಾರ್ನರ್‍ನ ಇ-ಕೆವೈಸಿ ಅವಕಾಶದಡಿ ರೈತನ(ಈಗಾಗಲೇ ಪಿಎಂಕಿಸಾನ್ ಯೋಜನೆಯಡಿ ಫಲಾನುಭವಿಗಳಾಗಿರುವ ಪ್ರತಿಯೊಬ್ಬ) ಆಧಾರ್ ಸಂಖ್ಯೆಯನ್ನು ನಂತರ ಆಧಾರ್ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ನಂತರ ಮೊಬೈಲ್‍ಗೆ ಒಟಿಪಿ ಯು ರವಾನೆಯಾಗುತ್ತದೆ. ಹೀಗೆ ಸ್ವೀಕರಿಸಿದ ಒಟಿಪಿಯನ್ನು ಪೋರ್ಟಲ್‍ನಲ್ಲಿ ದಾಖಲಿಸಿ ‘ಸಬ್‍ಮಿಟ್ ಫಾರ್ ಆಥ್ (SUBMIT FOR AUTH) ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು e-KYC is ‘successfully submitted’ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಒಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವೈಸಿ ಮಾಡಬಹುದಾಗಿದೆ. (ಈಗಾಗಲೇ ಇ-ಕೆವೈಸಿ ಆಗಿದ್ದರೆ. ‘e-KYC already done’ ಎಂಬ ಮಾಹಿತಿ ಗೋಚರಿಸುತ್ತದೆ).

ಯಾವ ಫಲಾನುಭವಿಯು ಮೊಬೈಲ್ ಸಂಖ್ಯೆ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್ ಸಂಖ್ಯೆಗೆ ಇ-ಕೆವೈಸಿಗಾಗಿ ಕಳುಹಿಸಿದ ಒಟಿಪಿಯು ಸ್ವೀಕೃತವಾಗುದಿಲ್ಲವೋ ಅವರು ಸಿಎಸ್‍ಸಿ(ಸಿಟಿಜನ್ ಸರ್ವಿಸ್ ಸೆಂಟರ್ಸ್) ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ ಅಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿ ಮಾಡಬಹುದಾಗಿದೆ. ಅಲ್ಲಿ ಕೈಬೆರಳಿನ ಗುರುತು ಆಧಾರದ ಮೇಲೆ ಇ-ಕೆವೈಸಿ ಮಾಡಬಹುದಾಗಿದೆ.

What’s your Reaction?
+1
0
+1
0
+1
0
+1
0
+1
0
+1
0
+1
0