2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪರಿಶೀಲನೆ :ಸಚಿವ ಎಂ. ಬಿ. ಪಾಟೀಲ್

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ/ಬೆಂಗಳೂರು:
ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆಯ ಕುರಿತು ಅಧ್ಯಯನ ನಡೆಸಿ ವರದಿ ನೀಡುವ ಕಾರ್ಯವನ್ನು ಐಡೆಕ್ ಸಂಸ್ಥೆಗೆ ವಹಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಟಿ. ಎನ್. ಜವರಾಯಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಗುಡ್ಡಗಾಡು ಪ್ರದೇಶ, ಎತ್ತರದ ರಚನೆಗಳು ಸಂಪರ್ಕರಸ್ತೆ (NH & SH), ರೈಲು ಮತ್ತು ಮೆಟ್ರೋ ಸಂಪರ್ಕ, ಬಳಕೆದಾರರಿಗೆ ಉದ್ದೇಶಿತ ವಿಮಾನ ನಿಲ್ದಾಣವನ್ನು ತಲುಪುವ ದೂರ ಮತ್ತು ಸಮಯ, ವಿಸ್ತಾರವಾದ ಭೂಪ್ರದೇಶ, ಜಮೀನಿನ ಪ್ರಕಾರಗಳು, ಕಡಿಮೆ ಜನಸಾಂದ್ರತೆಯ ಪ್ರದೇಶ ಮತ್ತು ಜಲಸಂಪನ್ಮೂಲದ ಲಭ್ಯತೆ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಸಂಭಾವ್ಯ ಸ್ಥಳಗಳ ಅಧ್ಯಯನ ನಡೆಸಲಾಗುತ್ತಿದೆ ಎಂದರು.

ಅದರಂತೆ, ಯೋಜನೆಗೆ ಸಂಬಂಧಿಸಿದಂತೆ ಯೋಜನಾ ವರದಿ/ ಪ್ರಸ್ತಾವನೆ ಸಿದ್ಧಪಡಿಸುವ ಕಾರ್ಯ ಪರಿಶೀಲನೆಯಲ್ಲಿರುತ್ತದೆ ಎಂದು ಸಚಿವರು ತಿಳಿಸಿದರು.

 

- Advertisement -  - Advertisement -  - Advertisement - 
Share This Article
error: Content is protected !!
";