ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಜ.೧೮ ಮತ್ತು ೧೯ ರಂದು ನಡೆಯುವ ಅಖಿಲ ಭಾರತ ೧೩ ನೇ ಶರಣ ಸಾಹಿತ್ಯ ಸಮ್ಮೇಳನದ ಪೋಸ್ಟರ್‌ನ್ನು ರಾಷ್ಟ್ರೀಯ ಹೆದ್ದಾರಿ-೧೩ ರಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್, ಕೆ.ಇ.ಬಿ.ಷಣ್ಮುಖಪ್ಪ, ಚಿತ್ರಕಲಾವಿದ ನಾಗರಾಜ್‌ಬೇದ್ರೆ, ಕೆ.ಪಿ.ಎಂ.ಗಣೇಶಯ್ಯ, ಕದಳಿ ವೇದಿಕೆ ಜಿಲ್ಲಾಧ್ಯಕ್ಷೆ ಪ್ರೊ.ಜಯಲಕ್ಷ್ಮಿ, ಪ್ರಧಾನ ಕಾರ್ಯದರ್ಶಿ ಶೋಭ ಮಲ್ಲಿಕಾರ್ಜುನ್, ಕಾರ್ಯದರ್ಶಿ ಡಾ.ಮಂಜುಳ, ಲೋಕೇಶ್ ಬಿ. ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.