Ad imageAd image

ಮಾದಕ ವಸ್ತುಗಳ ಪೆಡ್ಲರ್ ಗಳ ಮೇಲೆ ತೀವ್ರ ನಿಗಾ-ಆಯುಕ್ತ ಶಶಿಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಮಾದಕ ವಸ್ತುಗಳ ಪೆಡ್ಲರ್ ಗಳ ಮೇಲೆ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ, ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾದರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಎಚ್ಚರಿಸಿದರು.

ನಗರದ ಹಳೇ ಸಿಎಆರ್ ಮೈದಾನದಲ್ಲಿ ಡ್ರಗ್​ ಪೆಡ್ಲರ್ ಪರೇಡ್ ನಡೆಸಿ ಪೆಡ್ಲರ್ಸ್​ಗೆ ಖಡಕ್​ ವಾರ್ನಿಂಗ್​ ಕೊಟ್ಟ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಹೊಸವರ್ಷ ಆಚರಣೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗಬಾರದು, ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರ ಮೇಲೆ ನಿಗಾ ಇಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ, ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದ್ದು ಬೇರೆ ಬೇರೆ ಊರುಗಳಿಂದ ಹುಬ್ಬಳ್ಳಿಗೆ ಬರುವವರ ಸಂಖ್ಯೆ ಕೂಡ ಹೆಚ್ಚಿರುತ್ತದೆ. ಆದ್ದರಿಂದ ಮಾದಕ ವಸ್ತುಗಳ ಪೆಡ್ಲರ್ ಪರೇಡ್ ನಡೆಸಲಾಗಿದೆ ಎಂದು ತಿಳಿಸಿದರು.

 ಹೊಸವರ್ಷಕ್ಕೆ ಹಲವು ಕಾರ್ಯಕ್ರಮಗಳು ನಡೆಯುತ್ತವೆ. ಈ ಸಂದರ್ಭದಲ್ಲಿ ಅಪರಾಧ ಕೃತ್ಯಗಳು ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 50 ಪೆಡ್ಲರ್​ಗಳ ಮೇಲೆ ದೂರು ದಾಖಲಿಸಿಕೊಂಡಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಪೆಡ್ಲರ್ಸ್​ಗಳನ್ನು ವಶಕ್ಕೆ ಪಡೆದು ಎನ್​ಡಿಪಿಎಸ್ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗಿದೆ. ಕಳೆದ ನಾಲ್ಕೈದು ತಿಂಗಳಿನಿಂದ ಮಾದಕ ವ್ಯಸನಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಸಾವಿರಕ್ಕೂ ಹೆಚ್ಚು ಪಾಸಿಟಿವ್ ಬಂದಿವೆ. ಕಳೆದ 10 ವರ್ಷದಲ್ಲಿ ದಾಖಲಾದ ಪ್ರಕರಣಗಳ ಆಧಾರದ ಮೇಲೆ 440 ಪೆಡ್ಲರ್ಸ್​ಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಧ್ವನಿವರ್ಧಕಗಳನ್ನು ಬಳಸಲು ಸೂಚಿಸಿದ್ದೇವೆ. 10 ಗಂಟೆ ಮೇಲೆ ಯಾವುದೇ ಲೌಡ್ ಸ್ಪೀಕರ್ ಬಳಸಬಾರದು. ಖಾಸಗಿ ಜಾಗಗಳಲ್ಲಿ ಅಂದು ಪಾರ್ಟಿ ಮಾಡಲು ಯಾವುದೇ ನಿರ್ಬಂಧ ಇಲ್ಲ. ಡ್ರಿಂಕ್ ಅಂಡ್ ಡ್ರೈವ್ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಶಿಕುಮಾರ್ ಎಚ್ಚರಿಕೆ ನೀಡಿದರು.
ಪೊಲೀಸ್ ಇಲಾಖೆಯ ಪಿಎಸ್ಐ, ಸಿಪಿಐ, ಡಿವೈಎಸ್ಪಿ, ಎಸ್ಪಿ, ಎಸ್ಪಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

 

 

- Advertisement -  - Advertisement - 
Share This Article
error: Content is protected !!
";