ಬೆಂಗಳೂರಿನಲ್ಲಿ ದಾಖಲೆ 103 ಮಿ.ಮೀ ಮಳೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ 24 ಗಂಟೆಯೊಳಗೆ 103 ಮಿ.ಮೀ ಮಳೆಯಾಗಿದೆ. ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು ನಗರದ ಹಲವು ಭಾಗಗಳು ಜಲಾವೃತ್ತವಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ಸವಾರರು ಪರದಾಡುವಂತಾಯಿತು.

ಜನ ವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಮಹದೇವಪುರದ ಹೊರಮಾವುವಿನ ಸಾಯಿ ಲೇಔಟ್ ಮತ್ತು ಸಿಲ್ಕ್ ಬೋರ್ಡ್ ಸಂಪೂರ್ಣ ಜಲಾವೃತವಾಗಿದೆ. ಮಳೆಯಿಂದಾದ ಅಸ್ತವಸ್ತದ ಹಿನ್ನೆಲೆಯಲ್ಲಿ ಸಾರ್ವಜನಿಕರು ಬಿಬಿಎಂಪಿ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

- Advertisement - 

ಈ ಮಧ್ಯೆ ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಉಂಟಾದ ಹಾನಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಸವಾಲುಗಳನ್ನು ಎದುರಿಸಲು ಮತ್ತು ಪರಿಹಾರವನ್ನು ಕೈಗೊಳ್ಳಲು ದಿನದ 24 ಗಂಟೆಗಳೂ ಕೆಲಸ ಮಾಡುತ್ತಿದ್ದೇನೆಂದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಹೇಳಿದ್ದಾರೆ.

5 ಲಕ್ಷ ಪರಿಹಾರ ಘೋಷಣೆ-
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿದ್ದು ಪರಿಸ್ಥಿತಿ ಅವಲೋಕಿಸಿ ಮಳೆಯ ಅವಾಂತರ ಕುರಿತು ಸಿಎಂ ಮಾಹಿತಿ ಪಡೆದರು. ಬಿಬಿಎಂಪಿ ಕಂಟ್ರೋಲ್ ರೂಮ್ ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಕುರಿತ ಪರಿಸ್ಥಿತಿ ಅರಿತ ಸಿಎಂ ಕೂಡಲೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

- Advertisement - 

ವೈಟ್ ಫೀಲ್ಡ್ ನಲ್ಲಿ ಮಳೆಯಿಂದಾಗಿ ಗೋಡೆ ಕುಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದು ಮೃತ ಶಶಿಕಲಾ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಗುರುವಾರದವರೆಗೆ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

Share This Article
error: Content is protected !!
";