ನೂತನ ಮಾದರಿಯ “ರೈತ ಸಂತೆ”, “ಮಾವು ಹಾಗೂ ಹಲಸಿನ ಹಣ್ಣಿನ ಮೇಳ”

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜಿ.ಕೆ.ವಿ.ಕೆ ಆವರಣದಲ್ಲಿ 2025 ನೇ ಮೇ 24 ರಂದು ಬೆಳಿಗ್ಗೆ 7.00 ಗಂಟೆಯಿಂದ ಸಂಜೆ 4.00 ಗಂಟೆಯ ವರೆಗೆ ನೂತನ ಮಾದರಿಯ ರೈತ ಸಂತೆಕಾರ್ಯಕ್ರಮದಡಿ ಮಾವು ಹಾಗೂ ಹಲಸಿನ ಹಣ್ಣಿನ ಮೇಳವನ್ನು ಆಯೋಜಿಸಲಾಗಿದೆ.

ಮೇಳದಲ್ಲಿ ವಿವಿಧ ರೀತಿಯ ಮಾವಿನ ಹಣ್ಣು, ಹಲಸಿನ ಹಣ್ಣನ್ನು ಸಾರ್ವಜನಿಕರಿಗೆ ತಲುಪಿಸುವ ಹಾಗೂ ಕೃಷಿ ಸಂಬಂಧಿ ವಸ್ತುಗಳಿಗೆ ಒಂದೇ ಸೂರಿನಡಿ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶವನ್ನು ಹೊಂದಲಾಗಿದೆ. ಅಲ್ಲದೆ, ಕೃಷಿ ಉತ್ಪನ್ನ / ಪರಿಕರಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.

- Advertisement - 

ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ತೋಟಗಾರಿಕೆ ಹಣ್ಣುಗಳು, ಸುಗಂಧ ಮತ್ತು ಔಷಧೀಯ ಸಸ್ಯಗಳು, ಜೈವಿಕ ಗೊಬ್ಬರಗಳು, ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಸಸ್ಯ ಸಂರಕ್ಷಣೆ: ಜೈವಿಕ ಕೀಟನಾಶಕಗಳು, ಗುಣಮಟ್ಟದ ಪದಾರ್ಥಗಳು / ಪರಿಕರಗಳು, ಕರಕುಶಲ ವಸ್ತುಗಳು: ಗವ್ಯೋತ್ಪನ್ನಗಳು, ಅಡಿಕೆ ಉತ್ಪನ್ನಗಳು,

ರೇಷ್ಮೆ ಕೃಷಿಯ ಉಪ ಉತ್ಪನ್ನಗಳು, ಅಣಬೆ, ಜೇನು ಕೃಷಿ ವಾಣಿಜ್ಯೀಕರಣ ಉತ್ಪನ್ನಗಳು, ಪಶು ಸಂಗೋಪನೆ, ಕೃಷಿ ಪ್ರಕಟಣೆಗಳು, ವಿಶ್ವವಿದ್ಯಾನಿಲಯದ ಬಗ್ಗೆ ಮಾಹಿತಿ, ತಾರಸಿ ಕೈತೋಟ / ನಗರ ತೋಟಗಾರಿಕೆ ಇನ್ನು ಮುಂತಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿರುತ್ತದೆ.
ಸಾರ್ವಜನಿಕರು ಮತ್ತು ರೈತರು ವಿನೂತನ ರೈತ ಸಂತೆಯ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement - 

 

Share This Article
error: Content is protected !!
";