ಜೂ.1 ರಿಂದ ವಿದ್ಯಾರ್ಥಿಗಳ ಉಚಿತ ಬಸ್‌ಪಾಸ್‌ಗೆ ಅರ್ಜಿ ಆಹ್ವಾನ

News Desk

ಜೂ.1 ರಿಂದ ವಿದ್ಯಾರ್ಥಿಗಳ ಉಚಿತ ಬಸ್‌ಪಾಸ್‌ಗೆ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್,
ವಿಜಯನಗರ(ಹೊಸಪೇಟೆ) : ಹೊಸಪೇಟೆ ವಿಭಾಗದ 2025-26 ನೇ ಸಾಲಿನ ವಿದ್ಯಾರ್ಥಿಗಳ ಉಚಿತ, ರಿಯಾಯಿತಿ ಬಸ್‌ಪಾಸುಗಳನ್ನು ಸೇವಾಸಿಂಧು ತಂತ್ರಾಂಶದ ಮೂಲಕ ಸಂಪೂರ್ಣ ಗಣಕೀಕೃತವಾಗಿ ಪಾಸುಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸಪೇಟೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿ ಹೀರಾ ಅವರು ತಿಳಿಸಿದ್ದಾರೆ

ವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ಮತ್ತು ಹರಪನಹಳ್ಳಿ ಘಟಕಗಳಿಂದ ಪಾಸು ವಿತರಿಸಲು

- Advertisement - 

ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಹೊಸಪೇಟೆ ನಗರದ ಬಸ್ ನಿಲ್ದಾಣ ಸೇರಿದಂತೆ ಆಯಾ ತಾಲೂಕಿನ ವಿದ್ಯಾರ್ಥಿಗಳು ಸ್ಥಳೀಯ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";